ನೆಹರು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ

10:10 PM, Saturday, July 31st, 2010
Share
1 Star2 Stars3 Stars4 Stars5 Stars (No Ratings Yet)
Loading...

ಮಂಗಳೂರು : ನೆಹರು ಮೈದಾನದಲ್ಲಿ ಆಗಸ್ಟ್ 15ರಂದು ಆಚರಿಸಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಶ್ರೀ ವಿ.ಪೊನ್ನುರಾಜ್ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವರು  ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಲಿದ್ದಾರೆ ಮತ್ತು  ರಾಜ್ಯಮಟ್ಟದಲ್ಲಿ  ಪ್ರಶಸ್ತಿ ಪಡೆದವರನ್ನು ಸನ್ಮಾನಿಸಲಿದ್ದಾರೆ. ಅಪರಾಹ್ನ  ನಗರದ ಪುರಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿಗೆ ಸಂಬಂಧಿಸಿದ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ, ಜಿಲ್ಲಾ ಪಂಚಾಯತ್ ಸಿಎಓ ಶಿವಶಂಕರ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

                                   

Simillar Posts

    None Found

Leave a Reply