ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಶೇ.60 ರಷ್ಟು ಮತದಾನ

Friday, April 19th, 2024
vote-1st phase

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದ್ದು ವಿವಿಧ ರಾಜ್ಯಗಳ 102 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ.60 ರಷ್ಟು ಮತದಾನವಾಗಿದೆ. ತಮಿಳುನಾಡಿನಲ್ಲಿ ಶೇ.63.2, ರಾಜಸ್ಥಾನದಲ್ಲಿ ಶೇ.50.3, ಉತ್ತರ ಪ್ರದೇಶದಲ್ಲಿ ಶೇ.57.5 ಮತ್ತು ಮಧ್ಯಪ್ರದೇಶದಲ್ಲಿ ಶೇ.63.3ರಷ್ಟು ಮತದಾನವಾಗಿದೆ. ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಮತದಾನವಾಗಿದ್ದು, ಶೇ. 77.57 ರಷ್ಟು ವೋಟಿಂಗ್ ಆಗಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದು ಮತದಾನ ನಡೆದು, ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ. ಮತದಾನ ಮುಕ್ತಾಯಗೊಂಡಾಗ ಸುಮಾರು ಶೇ.60 ರಷ್ಟು ಮತದಾನವಾಗಿದೆ […]

ಎ. 25-26 ರಂದು ಬೊರಿವಲಿ ಶ್ರೀ ಪಾಂಡವೇಶ್ವರ ದೇವಸ್ಥಾನದಲ್ಲಿ ನೂತನ ಶಿವಲಿಂಗ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮ ಕಲಶೋತ್ಸವ

Monday, April 1st, 2024
Mundapeshwara

ಮುಂಬಯಿ : ತುಳು ಕನ್ನಡಿಗರು ಸಮಾಜ ಸೇವೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಬಯಿ ಮಹಾನಗರ ಹಾಗೂ ಉಪನಗರದಲ್ಲಿ ಮಾಡಿದ ಸಾಧನೆ ಅಪಾರ. ಅದೇ ರೀತಿ ಧಾರ್ಮಿಕ ಕ್ಷೇತ್ರದಲ್ಲಿಯೂ ಈ ಮಾಯಾನಗರಿಯಲ್ಲಿ ನಮ್ಮವರ ಕೊಡುಗೆ ತುಂಬಾ ಇದೆ.ಸುಮಾರು ಒಂದೂವರೆ ಶತಮಾನದ ಹಿಂದೆ ಕರ್ನಾಟಕ ಕರಾವಳಿಯಿಂದ ಉದ್ಯೋಗವನ್ನರಸಿ ಮುಂಬಯಿಗಾಗಮಿಸಿದ ನಮ್ಮ ಹಿರಿಯರು ಈ ನಗರದ ಉದ್ದಗಲಕ್ಕೂ ಚದುರಿಹೋಗಿದ್ದರು. ಎಲ್ಲರೂ ತುಳನಾಡಿನಿಂದಲೇ ಬಂದವರಾಗಿದ್ದರೂ ಕೂಡ ಪರಸ್ಪರ ಸಂಪರ್ಕವಿಲ್ಲದೇ ಇದ್ದ ಕಾರಣದಿಂದಾಗಿ ಯಾವುದೇ ಸಂದರ್ಭಗಳಲ್ಲಿಯೂ ಎಲ್ಲರೂ ಒಂದೆಡೆಯಲ್ಲಿ ಸೇರುತ್ತಿರಲಿಲ್ಲಾ. ಹೀಗಿರುವಾಗ ಈ ರೀತಿ […]

ಹಾಲಿನ ಡೈರಿಗಳ ಸಂಖ್ಯೆಯನ್ನು ಹೆಚ್ಚಿಸಲು ಮಧ್ಯಂತರ ಬಜೆಟ್ ನಲ್ಲಿ ಆದ್ಯತೆ

Thursday, February 1st, 2024
nirmala-seetharaman

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ್ದು, ದೇಶದಲ್ಲಿ ಹಾಲು ಮತ್ತು ಡೈರಿ ಉತ್ಪಾದನೆಯನ್ನು ಹೆಚ್ಚಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಭಾರತ ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದಿಸುವ ರಾಷ್ಟ್ರವಾಗಿದೆ. ಆದರೆ ಕಡಿಮೆ ಉತ್ಪಾದಕತೆ ಹೊಂದಿದೆ. ಹೀಗಾಗಿ ಡೈರಿಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವೆ ಹೇಳಿದ್ದಾರೆ. 2022-23ರಲ್ಲಿ ಭಾರತದ ಹಾಲಿನ ಉತ್ಪಾದನೆಯು 230.58 ಮಿಲಿಯನ್ ಟನ್‌ಗಳಿಗೆ ಅಂದರೆ ಶೇ. 4 ರಷ್ಟು ಏರಿಕೆಯಾಗಿದೆ. […]

ತೀಯಾ ಸಮಾಜ ಪಶ್ಚಿಮ ವಲಯ ದ ವತಿಯಿಂದ 20ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ, ಅರಸಿನ ಕುಂಕುಮ

Monday, March 21st, 2022
Tiya Samaja

ಮುಂಬಯಿ : ತೀಯಾ ಸಮಾಜ ಮುಂಬಯಿ ಇದರ ಪಶ್ಚಿಮ ವಲಯ ವತಿಯಿಂದ 20ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯು ಮಾ 20ರಂದು ಜೋಗೇಶ್ವರಿ ಪೂರ್ವ ಸಾಯಿ ಸಿದ್ದಿ ವೆಲ್ಪೇರ್ ಅಸೋಷಿಯೇಷನ್ ಸಭಾಗೃಹ, ಇಲ್ಲಿ ವೈಕುಂಠ ಭಟ್ ಇವರ ಪೌರೋಹಿತ್ಯದಲ್ಲಿ ತೀಯಾ ಸಮಾಜ ಮುಂಬಯಿ ಪಶ್ಚಿಮ ವಲಯದ ಕಾರ್ಯಾಧ್ಯಕ್ಷರಾದ ಸುಧಾಕರ್ ಉಚ್ಚಿಲ್ ಇವರ ನೇತೃತ್ವದಲ್ಲಿ ನಡೆಯಿತು. ಪೂಜಾ ವಿಧಿಯಲ್ಲಿ ಶುಶಾಂತ್ ಸಾಲ್ಯಾನ್ ಮತ್ತು ಅಂಕಿತಾ ಸಾಲ್ಯಾನ್ ದಂಪತಿ ಬಾಗವಹಿಸಿದ್ದರು. ಪ್ರತೀ ವರ್ಷದಂತೆ ಈ ಸಲವೂ ನವ ವಿವಾಹಿತರನ್ನು ತೀಯಾ […]

ಶ್ರೀದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ -ವಿರಾರ್ ವಾರ್ಷಿಕೋತ್ಸವ ಹಾಗೂ ಶಶಿಧರ ಕೆ. ಶೆಟ್ಟಿ ದಂಪತಿಯ ವೈವಾಹಿಕ ಬೆಳ್ಳಿ ಹಬ್ಬ ಸಂಬ್ರಮ

Tuesday, February 22nd, 2022
Sri Devi Yaksha Kala Nilaya

ಮುಂಬಯಿ : ನನ್ನ ಸಮಾಜ ಸೇವೆಯ ಯಶಸ್ಸಿಗೆ ಅನೇಕರು ಕಾರಣರು. ಅವರೆಲ್ಲರೆ ಪ್ರೇರಣೆಯಿಂದ ಹಾಗೂ ಮಾರ್ಗದರ್ಶನದಿಂದ ನಾನು ಸಮಾಜ ಸೇವಾ ನಿರತನಾಗಿದ್ದೇನೆ. ನನ್ನ ಗುರುಗಳ ಬಗ್ಗೆ ಯಾರಾದರೂ ಕೇಳಿದಲ್ಲಿ ಐಕಳ ಹರೀಶ್ ಶೆಟ್ಟಿಯವರ ಹೆಸರು ಹೇಳುತ್ತಿದ್ದೆ ಯಾಕೆಂದರೆ ಕೇವಲ ಮೂರು ವರ್ಷಗಳಲ್ಲಿ ಅದೆಷ್ಟೋ ಕೋಟಿ ರೂಪಾಯಿ ವೆಚ್ಚದಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಟ್ಟ ಐಕಳ ಹರೀಶ್ ಶೆಟ್ಟಿಯಂತವರನ್ನು ಗುರು ಎನ್ನಲು ನನಗೆ ಹೆಮ್ಮೆಯಾಗುತ್ತದೆ ಎಂದು ಶ್ರೀ ದೇವಿ ಯಕ್ಷಕಲಾ ನಿಲಯ ನಲಾಸೋಪಾರ – ವಿರಾರ್ ಇದರ ಅಧ್ಯಕ್ಷರಾದ […]

ಲತಾ ಮಂಗೇಶ್ಕರ್ ನಿಧನಕ್ಕೆ ದೇಶಾದ್ಯಂತ 2 ದಿನಗಳ ಕಾಲ ಶೋಕಾಚರಣೆ

Monday, February 7th, 2022
latha Mangeshkar

ನವದೆಹಲಿ : ಖ್ಯಾತ ಗಾಯಕಿ, ಭಾರತ ರತ್ನ ಪುರಸ್ಕೃತ ಲತಾ ಮಂಗೇಶ್ಕರ್ ನಿಧನಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 2 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿದ್ದು, 2 ದಿನಗಳ ಕಾಲ ದೇಶಾದ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದ್ದು, ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ. ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ತಿಳಿಸಲಾಗಿದೆ. ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. […]

ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ ನೂತನ ಸಮಿತಿಯ ಪದಗ್ರಹಣ

Friday, December 24th, 2021
jaya Sri Krishna

ಮುಂಬಯಿ : ಕಳೆದ ಎರಡು ದಶಕಗಳಿಂದ ಮಹಾನಗರದಲ್ಲಿ ಕ್ರೀಯಾಶೀಲವಾಗಿರುವ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ ಯ ನೂತನ ಸಮಿತಿಯ ಪದಗ್ರಹಣ ಸಮಾರಂಭವು ಡಿ. 21ರಂದು ಸಂಜೆ ಕುರ್ಲಾದ ಬಂಟರ ಸಂಘ ಮುಂಬಯಿಯ ಅನೆಕ್ಸ್ ಸಭಾಂಗಣದಲ್ಲಿ ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿಯ ಸಂಸ್ಥಾಪಕ ತೊನ್ಸೆ ಜಯಕೃಷ್ಣ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾದ ಎಲ್. ವಿ. ಅಮೀನ್ ಅವರು ಮಾತನಾಡುತ್ತಾ ಉಡುಪಿ ಹಾಗೂ ಮಂಗಳೂರು ಪ್ರದೇಶಗಳು ಮೊದಲಿಗಿಂತಲೂ […]

ಜಿಲ್ಲೆಗಳ ಅಭಿವೃದ್ದಿಗಾಗಿ ನಾವೆಲ್ಲರೂ ಕೈಜೋಡಿಸೋಣ – ತೋನ್ಸೆ ಜಯಕೃಷ್ಣ ಶೆಟ್ಟಿ

Tuesday, December 7th, 2021
Jayasree Krishna samithi

ಮುಂಬಯಿ: ಮಹಾನಗರದಲ್ಲಿ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರು ಕ್ರೀಯಾಶೀಲರಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 21 ನೇ ವಾರ್ಷಿಕ ಮಹಾಸಭೆಯು ನ. 5 ರಂದು ಸಂಜೆ ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಸಭಾಗೃಹದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ತೋನ್ಸೆ ಜಯಕೃಷ್ಣ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಿಲ್ಲವ ಸಮಾಜದ ಮುಖಂಡ, ಹಿರಿಯ ರಾಜಕೀಯ ನಾಯಕ ಎಲ್ ವಿ. ಅಮೀನ್ ಅವರನ್ನು  […]

ನಟಿ ಪೂನಂ ಪಾಂಡೆ ಮೇಲೆ ಪತಿಯಿಂದ ಗಂಭೀರ ಹಲ್ಲೆ, ಆಸ್ಪತ್ರೆಗೆ ದಾಖಲು

Tuesday, November 9th, 2021
poonam-Pande

ಮುಂಬಯಿ  : ನಟಿ ಪೂನಂ ಪಾಂಡೆ ಮೇಲೆ ಪತಿ ಸ್ಯಾಮ್ ಬಾಂಬೆ ಹಲ್ಲೆ ಮಾಡಿದ್ದಾರೆಂದು ಪೂನಂ ನೀಡಿದ ದೂರಿನ ಆಧಾರದ ಮೇಲೆ ಸ್ಯಾಮ್‌ರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೆ ಒಳಗಾದ ನಟಿ ಪೂನಂ ಪಾಂಡೆ ಈಗ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಟಿ ಪೂನಂ ಪಾಂಡೆ ಅವರು, ಸೋಮವಾರ (ನ.8) ರಾತ್ರಿ ಪತಿ ಸ್ಯಾಮ್‌ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಪೂನಂ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿದ್ದು, ಅವರ ಕಣ್ಣು, ತಲೆ, ಮುಖದ […]

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಆಸ್ಕರ್ ಫೆರ್ನಾಂಡಿಸ್ ರವರಿಗೆ ಆತ್ಮೀಯ ಶ್ರದ್ದಾಂಜಲಿ

Tuesday, September 28th, 2021
oscar-fernandes

ಮುಂಬಯಿ : ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಜನಪ್ರಿಯ ಸಮಾಜ ಸೇವಕ ಆಸ್ಕರ್ ಫೆರ್ನಾಂಡಿಸ್ ಅವರು ಸೆ. 13 ರಂದು ನಿಧನರಾಗಿದ್ದು, ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಕರಾವಳಿಯ ಉಭಯ ಜಿಲ್ಲೆಗಳ ಅಭಿವೃದ್ದಿ ಬಗ್ಗೆ ಕ್ರೀಯಾಶೀಲವಾಗಿರುವ ಸರಕಾರೇತರ ಸಂಸ್ಥೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಸೆ. 24ರಂದು ಜೂಮ್ ಮೂಲಕ ಶ್ರದ್ದಾಂಜಲಿ ಸಭೆ ನಡೆಯಿತು. ಈ ಸಭೆಯಲ್ಲಿ ಮುಂಬಯಿಯ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರು ಮಾತ್ರವಲ್ಲದೆ, ಊರಿನ ಗಣ್ಯರು ಬಾಗವಹಿಸಿದ್ದರು. ಜಯಶ್ರೀಕೃಷ್ಣ […]