ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ ನೆರವು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Saturday, July 31st, 2021
Bommai-meets-Health-minister

ನವದೆಹಲಿ  : ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಶ್ರೀ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. […]

ಮುಖ್ಯಮಂತ್ರಿ ದೆಹಲಿ ಪ್ರವಾಸ: ಪ್ರಧಾನಿ, ಕೇಂದ್ರ ಸಚಿವರ ಭೇಟಿ

Friday, July 30th, 2021
Bommai Sha

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು, ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು ಹಾಗೂ ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ತಿಳಿಸಿದರು. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ ಪ್ರಧಾನಿಯವರೊಂದಿಗೆ ಪ್ರವಾಹ ಪರಿಸ್ಥಿತಿ, ಕೋವಿಡ್ ನಿಯಂತ್ರಣ ಹಾಗೂ […]

ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಪ್ರಧಾನಿಗೆ ಮನವಿ

Friday, July 30th, 2021
Bommai-Modi-Meet

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರಿಗೆ ಶುಭಕೋರಿದ ಪ್ರಧಾನಿಯವರು, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ […]

ಭೂಗತ ಪಾತಕಿ ಛೋಟಾ ರಾಜನ್ ಗೆ ತೀವ್ರ ಹೊಟ್ಟೆನೋವು, ಏಮ್ಸ್​ ಆಸ್ಪತ್ರೆಗೆ ದಾಖಲು

Thursday, July 29th, 2021
chota-rajan

ದೆಹಲಿ : ತಿಹಾರ್ ಜೈಲಿನಲ್ಲಿರುವ  ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್, ಅನಾರೋಗ್ಯ ನಿಮಿತ್ತ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬೆಳಗ್ಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಏಪ್ರಿಲ್ನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟ ಕಾರಣ ಇದೇ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದನು.

ಆ್ಯಪ್​ಗಳ ಮೂಲಕ ಅಶ್ಲೀಲ ಸಿನಿಮಾಗಳನ್ನು ಪ್ರಸಾರ, ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್​ ಕುಂದ್ರಾ ಅರೆಸ್ಟ್

Tuesday, July 20th, 2021
Shilpa Shetty

ನವದೆಹಲಿ: ಆ್ಯಪ್ಗಳ ಮೂಲಕ ಅಶ್ಲೀಲ ಸಿನಿಮಾಗಳನ್ನು ಪ್ರಸಾರ ಮಾಡುತ್ತಿದ್ದ ಆರೋಪದ ಮೇಲೆ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿಯೂ ಆಗಿರು ರಾಜ್ ಕುಂದ್ರಾ ಅವರನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಸಿನಿಮಾಗಳನ್ನು ತಯಾರಿಯ  ರೂವಾರಿ ಅವರು ಎಂಬ ಬಗ್ಗೆ ಸಾಕಷ್ಟು ಸಾಕ್ಷ್ಯಗಳು ಲಭಿಸಿದ ಆಧಾರದ ಮೇರೆಗೆ ಅವರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಅಶ್ಲೀಲ ಸಿನಿಮಾಗಳನ್ನು ಕೆಲವು ಆ್ಯಪ್ಗಳ ಮೂಲಕ ಪ್ರಸಾರ ಮಾಡುತ್ತಿರುವ ಕುರಿತು 2021ರ ಫೆಬ್ರವರಿಯಲ್ಲಿ ಮುಂಬೈ ಕ್ರೈಂ ಬ್ರ್ಯಾಂಚ್ನಲ್ಲಿ […]

ಪ್ರಧಾನಿ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Friday, July 16th, 2021
CM Delhi

ನವ ದೆಹಲಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲ ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಮನವಿ ಮಾಡಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರುಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ […]

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಹಾನಿ : ದೆಹಲಿಯಿಂದ ಸಚಿವೆ ಶೋಭಾ ಕರಂದ್ಲಾಜೆ ವಿಡಿಯೋ ಕಾನ್ಫೆರನ್ಸ್

Friday, July 16th, 2021
Shobha Karandlaje

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ದೆಹಲಿಯಲ್ಲಿದ್ದುಕೊಂಡೇ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಉಂಟಾದ ಭಾರಿ ಮಳೆಯ ವಿವರಗಳನ್ನು  ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ್ದಾರೆ. ಬೆಳಿಗ್ಗೆಯೇ ತಮ್ಮ ದೆಹಲಿಯ ಕಛೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಳೆಯಿಂದ ಆಗಲಿರುವ ಪೃಕತಿ […]

ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆದ ಕರ್ನಾಟಕದ ನಾಲ್ವರು ಸಂಸದರು

Wednesday, July 7th, 2021
cabinet

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ  ಕೇಂದ್ರ ಸಂಪುಟ ಪುನರ್ ರಚನೆ ಗೊಂಡಿದ್ದು ರಾಷ್ಟ್ರಪತಿ ಭವನದಲ್ಲಿ ಜು.7 ರಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಎ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ್ ಖೂಬಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜೀವ್ ಚಂದ್ರಶೇಖರ್ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಅಧಿಕಾರ […]

ಬಿಲ್ಲವರ ಎಸೋಸಿಯೇಷನ್ ಮುಂಬಯಿ ವತಿಯಿಂದ ಜೋಗೇಶ್ವರಿ ಕಚೇರಿಯಲ್ಲಿ ಕಿಟ್ ವಿತರಣೆ

Sunday, July 4th, 2021
Billavara Association

ಮುಂಬಯಿ : ಬಿಲ್ಲವರ ಅಶೋಸಿಯೇಶನ್ ಮುಂಬಯಿ ಅಧ್ಯಕ್ಷರಾದ ಹರೀಶ್ ಜಿ. ಅಮೀನ್ ಅವರ ನೇತೃತ್ವದಲ್ಲಿ ಸಮಾಜದ ದಾನಿಗಳ ಸಹಾಯದಿಂದ ಎಸೋಸಿಯೇಷನ್ 23 ಸ್ಥಳೀಯ ಕಚೇರಿಯಲ್ಲಿ ಸಮಾಜದ ಅಸಾಯಕ ಕುಟುಂಬಗಳಿಗೆ ಅಹಾರ ಕಿಟ್ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜುಲೈ 4 ರಂದು ಬಿಲ್ಲವರ ಎಸೋಸಿಯೇಷನ್ ಜೋಗೇಶ್ವರಿ ಸ್ಥಳೀಯ ಕಚೇರಿಯ ಕಾರ್ಯಾಲಯದಲ್ಲಿ ಸಮಾಜದ ಬಂಧುಗಳಿಗೆ ಕಿಟ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸಮಾಜದ ಅರ್ಹ ಕುಟುಂಬಗಳಿಗೆ ಕಿಟ್ ವಿತರಿಸುತ್ತಾ ಎಸೋಸಿಯೇಷನ್ ಉಪಾಧ್ಯಕ್ಷ ಶಂಕರ್ ಡಿ. ಪೂಜಾರಿಯವರು ಮಾತನಾಡುತ್ತಾ ಹಿಂದಿನಿಂದ ಪ್ರತಿ ಸ್ಥಳೀಯ […]

ಅಮೀರ್ ಖಾನ್ ಎರಡನೇ ಪತ್ನಿ ಕಿರಣ್ ರಾವ್ಗೆ ವಿಚ್ಛೇದನ ಕೊಟ್ಟಿದ್ದೇಕೆ ಗೊತ್ತಾ ?

Saturday, July 3rd, 2021
Amir Khan

ಮುಂಬಯಿ  :  ಅಮೀರ್ ಖಾನ್ ರೀನಾ ದತ್‌ಗೆ ವಿಚ್ಛೇದನ ನೀಡಿದ ಬಳಿಕ ಕಿರಣ್ ರಾವ್ ಅವರನ್ನು ವಿವಾಹವಾಗಿ ಅವರೊಂದಿಗೆ ಇದ್ದರು. ಅಮೀರ್ ಖಾನ್ ಜೀವನದಲ್ಲಿ ಇಬ್ಬರು ಮಹಿಳೆಯರು ಮಾತ್ರ ಬಂದರು ಎಂದು ಹೇಳಲಾಗಿದೆ. ಆದರೆ ರೀನಾಳ ಜೊತೆ ವಿಚ್ಛೇದನ ಹಾಗು ಕಿರಣ್ ರಾವ್ ಜೊತೆ ಮದುವೆಯಾಗಿತ್ತು. ಆದರೆ ಈಗ ಕಿರಣ್ ರಾವ್ ಜೊತೆಗೂ ವಿಚ್ಛೇದನವಾಗಿದೆ. ಬಾಲಿವುಡ್ ನಟ ಅಮೀರ್ ಖಾನ್ ಘೋಷಣೆಯೊಂದನ್ನ ಮಾಡಿದ್ದು ತನಗೆ ಎಷ್ಟೇ ಮಕ್ಕಳಾದರೂ ಅವರನ್ನ ಮುಸಲ್ಮಾನರಾಗೇ ಮಾಡುತ್ತೇನೆ ಎಂದಿದ್ದಾನೆ. ನಟ ಅಮೀರ್ ಖಾನ್ […]