ಮಂಗಳೂರಿನಲ್ಲಿ 2 ಕಿ.ಮೀ. ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆಯುದ್ದಕ್ಕೂ ಜನಸಾಗರ

Monday, April 15th, 2024
ಮಂಗಳೂರಿನಲ್ಲಿ 2 ಕಿ.ಮೀ. ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆಯುದ್ದಕ್ಕೂ ಜನಸಾಗರ

ಮಂಗಳೂರು : ಲೋಕಸಭಾ ಚುನಾವಣೆ ಹಿನ್ನಲೆ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾನುವಾರ ಸರಿಯಾಗಿ 7.36ಕ್ಕೆ ನಾರಾಯಣ ಗುರು ವೃತ್ತದ ಬಳಿಗೆ ಆಗಮಿಸಿ 7.39ಕ್ಕೆ ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿ ರೋಡ್ ಶೋಗಾಗಿ ಸಿದ್ಧಪಡಿಸಲಾದ ಅಲಂಕೃತ ವಾಹನವನ್ನೇರಿ ರೋಡ್ ಶೋ ಆರಂಭಿಸಿದರು. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್ ಶೋ ನಡೆಸಿದರು. ಪ್ರಧಾನಿ ಮೋದಿಗಾಗಿ ರೋಡ್ ಶೋ ನಡೆಯುವ ರಸ್ತೆಯುದ್ದಕ್ಕೂ ಸಾವಿರಾರು ಮಂದಿ ಜಮಾಯಿಸಿ ಪ್ರಧಾನಿ ಮೋದಿ ಅವರಿಗೆ […]

ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡೋದರಲ್ಲಿ ತಪ್ಪುಇದೆಯಾ, ಉಮಾನಾಥ ಕೋಟ್ಯಾನ್ ಪ್ರಶ್ನೆ

Saturday, April 13th, 2024
Umanath-kotian

ಮಂಗಳೂರು : ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡೋದರಲ್ಲಿ ಏನಾದರೂ ತಪ್ಪುಇದೆಯಾ ಬಿಜೆಪಿಗೆ ಮುಸ್ಲಿಂ, ಕ್ರಿಶ್ಚಿಯನ್, ಬಂಟರು, ಬಿಲ್ಲವರು, ಕುಲಾಲರು ಪ್ರತಿಯೊಂದು ಸಮಾಜ ಮತ ಚಲಾಯಿಸುತ್ತಾರೆ. ಬಿಜೆಪಿ ಭಾರತ ದೇಶದ ಪ್ರತಿಯೊಬ್ಬನ ಪಾರ್ಟಿ. ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶ ಕೊಟ್ಟಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ಮುಖಂಡ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜನಾರ್ದನ ಪೂಜಾರಿ ಅವರು ನಳಿನ್ ಕುಮಾರ್ ಕಟೀಲ್ ಎದುರು ಸ್ಪರ್ಧೆಗಿಳಿದಾಗ ಜಿಲ್ಲೆಯ […]

ಪ್ರಧಾನಿಯವರ ರೋಡ್ ಶೋ ಬಿಲ್ಲವರಿಗೆ ಮಂಕುಬೂದಿ ಎರಚುವ ಪ್ರಯತ್ನ : ಸತ್ಯಜಿತ್ ಸುರತ್ಕಲ್

Saturday, April 13th, 2024
satyajith

ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಬಿಲ್ಲವರಿಗೆ ಟಿಕೆಟ್ ನೀಡಿರುವುದನ್ನು ನೋಡಿ ಬಿಲ್ಲವರು ಎಲ್ಲಿ ಬಿಜೆಪಿ ಕೈ ಬಿಡುತ್ತದೆಯೋ ಎಂಬ ಅಂಜಿಕೆಯಿಂದ ಬಿಜೆಪಿಗೆ ಮತ್ತೆ ಬ್ರಹ್ಮಶ್ರೀ ನಾರಾಯಣ ಗುರುಗಳ ನೆನಪಾಗಿದೆ. ಅದಕ್ಕಾಗಿ ಪ್ರಧಾನಿಯವರ ಮೂಲಕ ನಾರಾಯಣ ಗುರು ವೃತ್ತದಿಂದ ರೋಡ್ ಶೋಗೆ ಬಿಜೆಪಿ ಮುಂದಾಗಿದೆ, ಇದು ಸಮಾಜಕ್ಕೆ ಮಂಕುಬೂದಿ ಎರಚುವ ಪ್ರಯತ್ನವಾಗಿದೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ […]

ಕೋತಿಗಳ ಕಾಟ, ಚುನಾವಣೆಯ ಹಿನ್ನೆಲೆಯಲ್ಲಿ ವಿಟ್ಲಾ ಪೊಲೀಸರಿಗೆ ನೀಡಿದ ಕೋವಿಯನ್ನು ಮರಳಿ ಪಡೆದ ರೈತ

Friday, April 12th, 2024
nishanth-gun

ಬಂಟ್ವಾಳ : ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರೈತರೊಬ್ಬರು ತನ್ನ ಬಳಿ ಇದ್ದ ಕೋವಿಯನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ವಿಟ್ಲಾ ಪೊಲೀಸರ ವಶಕ್ಕೆ ನೀಡಿದ್ದರು. ನಿಶಾಂತ್ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದು ಬಂದೂಕಿನ ಅಗತ್ಯತೆ ವಿವರಿಸಿದ್ದರು. ಡಿಸಿ ಅವರ ಮನವಿಗೆ ಕಿವಿಗೊಡದ ಕಾರಣ, ನಿಶಾಂತ್ ತಮ್ಮ ಬಂದೂಕನ್ನು ವಿಟ್ಲ ಪೊಲೀಸ್ ಠಾಣೆಯಲ್ಲಿ ಠೇವಣಿ ಇಟ್ಟಿದ್ದರು. ಮಣಿಮೂಲೆ ಗೋವಿಂದ ಭಟ್ ಮತ್ತು ವಕೀಲ ಸುಬ್ರಹ್ಮಣ್ಯ ಭಟ್ ಅವರೊಂದಿಗೆ ಪೊಲೀಸರು ತಮ್ಮ ಗನ್ ಹಿಂತಿರುಗಿಸುವಂತೆ ನಿಶಾಂತ್ ಏಪ್ರಿಲ್ 1 ರಂದು ಹೈಕೋರ್ಟ್‌ಗೆ ಅರ್ಜಿ […]

ಲೋಕಸಭಾ ಚುನಾವಣೆ ಯ ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ವಿಶೇಷ ನಿಗಾ

Friday, April 12th, 2024
election-officer

ಮಂಗಳೂರು : ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಹಾಗೂ ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು ಎಂದು ರಾಜ್ಯಕ್ಕೆ ನಿಯೋಜನೆಗೊಂಡ ವಿಶೇಷ ವೆಚ್ಚ ವೀಕ್ಷಕ ಬಿ. ಮುರಳೀ ಕುಮಾರ್ ಅವರು ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏ.12ರ ಶುಕ್ರವಾರ 17- ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ […]

ದ್ವಿತೀಯ ಪಿ.ಯು.ಸಿ. ಫಲಿತಾಂಶ : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಅತುತ್ತಮ ಸಾಧನೆ

Friday, April 12th, 2024
purohith-kushiben

ಪುತ್ತೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್ ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ರಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ಕಲಾ ವಿಭಾಗದಲ್ಲಿ ಪುರೋಹಿತ ಖುಷಿಬೆನ್ ರಾಜೇಂದ್ರಕುಮಾರ್ (ಉಪ್ಪಿನಂಗಡಿಯ ರಾಜೇಂದ್ರಕುಮಾರ್ ಹಾಗೂ ಮನೀಷಾಬೆನ್ ಇವರ ಪುತ್ರಿ) ಇವರು 594 ಅಂಕಗಳನ್ನು ಗಳಿಸಿಕೊಳ್ಳುವುದರ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ ಹಾಗೂ ರಾಜ್ಯಕ್ಕೆ ತೃತೀಯ ರ‍್ಯಾಂಕ್ ಗಳಿಸಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ನೇತ್ರಾ ಡಿ. […]

ಲೋಕಸಭಾ ಚುನಾವಣೆ-ಕಾರ್ಮಿಕರಿಗೆ ವೇತನ ಸಹಿತ ರಜೆ

Thursday, April 11th, 2024
ಲೋಕಸಭಾ ಚುನಾವಣೆ-ಕಾರ್ಮಿಕರಿಗೆ ವೇತನ ಸಹಿತ ರಜೆ

ಮಂಗಳೂರು :- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಇದೇ ಏ.26 ರ ಶುಕ್ರವಾರ ಚುನಾವಣಾ ಮತದಾನ ನಡೆಯಲಿದೆ. ಆ ದಿನದಂದು ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಅರ್ಹ ಮತದಾರರಾಗಿರುವ ಎಲ್ಲಾ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನದ ವೇತನ ಸಹಿತ ರಜೆ ನೀಡುವಂತೆ ಹಾಗೂ ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ […]

ಎಳನೀರು ಕುಡಿದು 137 ಮಂದಿ ಅಸ್ವಸ್ಥ, ಅಡ್ಯಾರಿನ ಬೊಂಡ ಫ್ಯಾಕ್ಟರಿ ಗೆ ನೋಟೀಸ್ ನೀಡಿ ಬಂದ್ ಮಾಡಲು ಆದೇಶ

Thursday, April 11th, 2024
ಎಳನೀರು ಕುಡಿದು 137 ಮಂದಿ ಅಸ್ವಸ್ಥ, ಅಡ್ಯಾರಿನ ಬೊಂಡ ಫ್ಯಾಕ್ಟರಿ ಗೆ ನೋಟೀಸ್ ನೀಡಿ ಬಂದ್ ಮಾಡಲು ಆದೇಶ

ಮಂಗಳೂರು : ಅಡ್ಯಾರಿನ ಬೊಂಡ ಫ್ಯಾಕ್ಟರಿ ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಮಂಗಳೂರು ಮತ್ತು ತಂಡದವರು ಏಪ್ರಿಲ್ 11 ರಂದು ಪುನಃ ಸ್ಥಳ ಪರಿಶೀಲನೆ ಮಾಡಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ತಿಳುವಳಿಕೆ ನೋಟೀಸ್ ನೀಡಿ ಬಂದ್ ಮಾಡಿಸಲಾಯಿತು. ಆನಂತರ ತುಂಬೆಯಲ್ಲರುವ ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರಸ್ತೆಯ […]

ಪರಶುರಾಮ ಥೀಂ ಪಾರ್ಕ್ ಕಾಮಗಾರಿ ವಿವಾದ, ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ

Thursday, April 11th, 2024
ಪರಶುರಾಮ ಥೀಂ ಪಾರ್ಕ್ ಕಾಮಗಾರಿ ವಿವಾದ, ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ

ಕಾರ್ಕಳ : ಪರಶುರಾಮ ಥೀಂ ಪಾರ್ಕ್ ನಲ್ಲಿ ಪ್ರತಿಷ್ಟಾಪನೆಗೊಂಡ ಪರಶುರಾಮನ ಪ್ರತಿಮೆ ರಹಸ್ಯ ಬಯಲಿಗೆಳೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಕಾಂಗ್ರೆಸ್ ಮುಖಂಡರ ವಿರುದ್ಧ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಕಳೆದ ಅ. 22ರಂದು ಪರಶುರಾಮ ಥೀಂ ಪಾರ್ಕ್ ಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ ನೀಡಿ ಪ್ರತಿಮೆಯ ಗುಣಮಟ್ಟದ ಪರಿಶೀಲನೆ ನಡೆಸಿ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದಿದ್ದರು. ಕಾಂಗ್ರೆಸ್ ಮುಖಂಡರು ಫೈಬರ್ ಅವಶೇಷಗಳನ್ನು ಹಿಡಿದುಕೊಂಡು ಸಾರ್ವಜನಿಕರಿಗೆ […]

ಮೌಲ್ಯಮಾಪನಾ ಸಂಭಾವನೆ, ಅತಿಥಿ ಉಪನ್ಯಾಸಕರ ವೇತನ ಪಾವತಿಗೆ ವಿವಿಯಲ್ಲಿ ದುಡ್ಡಿಲ್ಲ. ರಾಜ್ಯ ಸರಕಾರ ಮಧ್ಯ ಪ್ರವೇಶಕ್ಕೆ ಡಾ.ಹರೀಶ್ ಆಚಾರ್ಯ ಆಗ್ರಹ

Thursday, April 11th, 2024
Harish-Achar

ಮಂಗಳೂರು : ಪರೀಕ್ಷಾ ಕಾರ್ಯವನ್ನು ನಿರ್ವಹಿಸಿರುವ ಉಪನ್ಯಾಸಕರಿಗೆ ಮೌಲ್ಯಮಾಪನ ಸಂಭಾವನೆಯನ್ನು ಹಾಗೂ ಅತಿಥಿ ಉಪನ್ಯಾಸಕರುಗಳಿಗೆ ಮಾಸಿಕ ವೇತನವನ್ನು ಪಾವತಿಸಲು ಮಂಗಳೂರು ವಿಶ್ವವಿದ್ಯಾನಿಲಯವು ಪರದಾಡುತ್ತಿದೆ. ಬಾಕಿ ಪಾವತಿಸಲು ಯಾವುದೇ ಸರಿಯಾದ ಯೋಜನೆಯನ್ನು ಹೊಂದದೇ ಬೇರೆ ಬೇರೆ ಸಬೂಬುಗಳನ್ನು ಹೇಳಿಕೊಂಡು ಕಾಲಹರಣ ಮಾಡುತ್ತಿರುವ ವಿವಿಯು ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ಅಸಮರ್ಥವಾಗಿದೆ. ಆದುದರಿಂದ ರಾಜ್ಯ ಸರಕಾರವು ತಕ್ಷಣವೇ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ.ಎಸ್ ಆರ್ ಹರೀಶ್ ಆಚಾರ್ಯ ಆಗ್ರಹಿಸಿದ್ದಾರೆ. ವಿಶ್ವವಿದ್ಯಾಲಯವು ಫೆಬ್ರವರಿ […]