ಮರಕಡ ವಾರ್ಡಿನಲ್ಲಿ ಕೃಷಿ ಸಚಿವರಿಂದ ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಅಭಿಯಾನಕ್ಕೆ ಚಾಲನೆ

Friday, June 25th, 2021
BC-Patil

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕುಂಜತ್ತಬೈಲ್ ಪ್ರದೇಶದ ಮರಕಡ ವಾರ್ಡಿನ ದಿ. ಕಾಂತಣ್ಣ ಶೆಟ್ಟಿ ಕೊಂರ್ಗಿಬೈಲ್ ಇವರ ಹಡೀಲು ಬಿಟ್ಟ ಜಮೀನಿನಲ್ಲಿ ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಅಭಿಯಾನದ ಅಂಗವಾಗಿ ರಾಜ್ಯದ ಮಾನ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಯಾಂತ್ರೀಕೃತ ಭತ್ತದ ಕೃಷಿ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಭಾಜಪಾ ಉತ್ತರ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, […]

ಕಲಿಕಾ ನಿರಂತರತೆ  ಕಾರ್ಯಪಡೆ  ರಚನೆ: ಸುರೇಶ್ ಕುಮಾರ್

Friday, June 25th, 2021
Suresh-Kumar

ಬೆಂಗಳೂರು: ಕೋವಿಡ್ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಕಲಿಕಾ ನಿರಂತರತೆ, ಕಲಿಕಾ ಸಾಮಗ್ರಿ, ಕಲಿಕಾ ನಿರಂತರ ಮೌಲ್ಯಮಾಪನ ಕುರಿತು ಕಾಲಕಾಲಕ್ಕೆ ಸಲಹೆ ನೀಡಲು ಸಮಾಜದ ವಿವಿಧ ಸ್ತರಗಳ ವ್ಯಕ್ತಿಗಳು, ಶಿಕ್ಷಣ ತಜ್ಞರನ್ನೊಳಗೊಂಡ ಕಾರ್ಯಪಡೆಯನ್ನು ರಚಿಸಿ, ವಿದ್ಯಾರ್ಥಿ ಕಲಿಕೆಯ ಪರಾಮರ್ಶೆಗೆ ನಿರಂತರ ಸೂತ್ರವನ್ನು ರಚಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಕೋವಿಡ್ ಕಾಲಘಟ್ಟದಲ್ಲಿ ಶಾಲಾರಂಭ ಸೇರಿದಂತೆ ಮಕ್ಕಳ ಕಲಿಕಾ ನಿರಂತರತೆ ಮತ್ತು ಡಾ. ದೇವಿಶೆಟ್ಟಿ ಸಮಿತಿ ವರದಿ ಕುರಿತು ಚರ್ಚಿಸಲು ಶುಕ್ರವಾರ ವಿವಿಧ ಶಿಕ್ಷಣ ತಜ್ಞರು, […]

ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕಪಡಬೇಕಿಲ್ಲ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Friday, June 25th, 2021
Sudhakar

ಬೆಂಗಳೂರು : ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಒಂದು ಪ್ರಕರಣ ಬೆಂಗಳೂರಿನಲ್ಲಿ ಮತ್ತು ಇನ್ನೊಂದು ಪ್ರಕರಣ ಮೈಸೂರಿನಲ್ಲಿ ಕಂಡುಬಂದಿದೆ. ಇಬ್ಬರೂ ಸೌಮ್ಯ ಲಕ್ಷಣಗಳನ್ನು ಹೊಂದಿದ ರೋಗಿಗಳಾಗಿದ್ದಾರೆ. ಮೈಸೂರಿನ ರೋಗಿ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹೊಸ ವೈರಾಣುವಿನಿಂದ ಸೋಂಕಿತರಿಗೆ ಹೆಚ್ಚು ಸಮಸ್ಯೆಯೇನೂ ಆಗಿಲ್ಲ. ಇವರ ಸಂಪರ್ಕಿತರಿಗೂ ಪರೀಕ್ಷೆ ಮಾಡಿಸಿ ನೋಡಿದಾಗಲೂ […]

ಜೂನ್ 26 ಅಂತರಾಷ್ಟ್ರೀಯ ಡ್ರಗ್ ವಿರೋಧಿ ದಿನ, 50 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನಾಶ

Friday, June 25th, 2021
Bommai

ಬೆಂಗಳೂರು : ಕಳೆದ ವರ್ಷ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾಗಿರುವ 50 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಪ್ರಕಾರದ ಡ್ರಗ್ಸ್ ನ್ನು ಶನಿವಾರ ನಾಶ ಪಡಿಸಲಾಗುವುದು ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಅಂತರಾಷ್ಟ್ರೀಯ ಡ್ರಗ್ ವಿರೋಧಿ ಮತ್ತು ಅಕ್ರಮ ಕಳ್ಳಸಾಗಣೆ ದಿನದ ಅಂಗವಾಗಿ ನ್ಯಾಯಾಲಯದ ಆದೇಶದ ಮೇರೆಗೆ ಡ್ರಗ್ಸ್ ನಾಶ ಮಾಡಲಾಗುವುದು ಎಂದು ಅವರು ತಿಳಿಸಿದರು. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ಗಾಂಜಾ-ಅಫೀಮು, ಬ್ರೌನ್ […]

ಹೊಸ ಮನೆ ನಿರ್ಮಾಣಕ್ಕೆ ಹಣ ಕೊಡಲಿಲ್ಲ ಎಂದು ಮಾಜಿ ಕಾರ್ಪೊರೇಟರ್ ಹತ್ಯೆ, ಇಬ್ಬರು ಸಂಭದಿಕರ ಬಂಧನ

Friday, June 25th, 2021
Peter Surya

ಬೆಂಗಳೂರು : ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರೇಖಾ ಪತಿ ಕದಿರೇಶ್ ಸಂಬಂಧಿಗಳಾದ ಪೀಟರ್ ಮತ್ತು ಸೂರ್ಯ ಬಂಧಿತ ಆರೋಪಿಗಳು. ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಲು ಹೋದಾಗ ಪೊಲೀಸರ ಮೇಳೆ ಹಲ್ಲೆಗೆ ಮುಂದಾಗಿದ್ದಾರೆ. ಓರ್ವ ಪಿಎಸ್ ಐ ಹಾಗು ಓರ್ವ ಕಾನ್ ಸ್ಟೇಬಲ್ ಮೆಲೆ ಹಲ್ಲೆ ಮಾಡಿದ್ದಾರೆ. ಹೀಗಾಗಿ ಇನ್ಸ್ ಪೆಕ್ಟರ್ ಶಿವಸ್ವಾಮಿ ಮತ್ತು ಕಾಟನ್ ಪೇಟೆ ಇನ್ಸ್ ಪೆಕ್ಟರ್ ಚಿದಾನಂದ್ ಆತ್ಮರಕ್ಷಣೆಗಾಗಿ […]

ಪುರಸಭೆ ಸದಸ್ಯ, ತಾಯಿ, ಸಹೋದರ ಸೇರಿ ಒಂದೇ ಕುಟುಂಬದ ಮೂವರು ಕರೊನಾಗೆ ಬಲಿ

Friday, June 25th, 2021
Vadi-Death

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಕರೊನಾಗೆ ಪುರಸಭೆ ಸದಸ್ಯ ಮತ್ತು ಇವರ ತಾಯಿ, ಸಹೋದರ ಸೇರಿ ಒಂದೇ ಕುಟುಂಬದ ಮೂವರು ಬಲಿಯಾಗಿದ್ದು, ಮತ್ತೊಬ್ಬ ಸಹೋದರನ ಸ್ಥಿತಿ ಗಂಭೀರವಾಗಿರುವ ಘಟನೆ ಈ ಘಟನೆ ಸಂಭವಿಸಿದೆ. ಆರ್ಸಿ ತಾಂಡದ ನಿವಾಸಿ ಚಾಂದಿಬಾಯಿ ನಾಯಕ್ (74), ಇವರ ಪುತ್ರ ವಾಡಿ ಪುರಸಭೆ ಸದಸ್ಯ ಪ್ರಕಾಶ್ ನಾಯಕ್(46) ಮತ್ತು ಕಿರಿಯ ಪುತ್ರ ಭಜನ್ ನಾಯಕ್(32) ಮೃತರು. ಕಳೆದ ವಾರ ಪ್ರಕಾಶ್ ನಾಯಕ್ ಕರೊನಾಗೆ ಬಲಿಯಾಗಿದ್ದರು. ಇವರ ಕಿರಿಯ ಸಹೋದರ ಭಜನ್ ಮತ್ತು […]

ಸರ್ಕಾರ ಬೀಳಿಸಿವ ಶಕ್ತಿ ನನಗೆ ಇದೆ : ಮಾಜಿ ಸಚಿವ ರಮೇಶ್​ ಜಾರಕಿಹೊಳಿ

Friday, June 25th, 2021
jaraki-holi

ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುತ್ತೂರು ಮಠದ ಸ್ವಾಮೀಜಿ ಅವರನ್ನು ಭೇಟಿಯಾಗಲು ತೆರಳಿರುವುದು ಬಾರಿ ಕುತೂಹಲ ಮೂಡಿಸಿದೆ. ಸುತ್ತೂರು ಮಠದ ಸ್ವಾಮೀಜಿ ಅವರನ್ನು ಭೇಟಿಯಾಗಲು ಬೆಳಗಾವಿಯಿಂದ ಮೈಸೂರಿಗೆ ರಮೇಶ್ ಜಾರಕಿಹೊಳಿ ಬರುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿತ್ತು. ಸಚಿವ ಸ್ಥಾನಕ್ಕಾಗಿ ಅವರು ಬರುತ್ತಿದ್ದಾರೆ ಎಂಬ ಸುದ್ದಿಯೂ ಹಬ್ಬಿತ್ತು. ಸುತ್ತೂರು ಶ್ರೀಗಳನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್, ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು […]

ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಹ ವೈರಲ್

Friday, June 25th, 2021
siddaramaiah

ಗದಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳು ಕಾರ ಹುಣ್ಣಿಮೆಗೆ ಸಿಂಗಾರಗೊಂಡ ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬರೆದು ಅಭಿಮಾನ ತೋರಿಸಿದ್ದಾರೆ. ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡುವ ಪ್ರತೀತಿ ಇದೆ. ಈ ಬಾರಿ ಕೂಡ ಸರಳವಾಗಿ ಗ್ರಾಮಸ್ಥರು ಕಾರ ಹುಣ್ಣಿಮೆ ಆಚರಿಸಿದ್ದಾರೆ. ಈ ಬಾರಿ ಎತ್ತಿಗೆ ಸಿಂಗರಿಸುವ ವೇಳೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಕ್ಯಾಂಪೇನ್ ಮಾಡಿ ಗಮನ ಸೆಳೆದಿದ್ದಾರೆ. ಗ್ರಾಮದಲ್ಲಿ […]

ಕೋರೊನಾ ನಿಯಂತ್ರಣದಲ್ಲಿದೆ, ನಿರ್ಗಮಿಸಿಲ್ಲ : ಸಚಿವ ಸಿ.ಸಿ.ಪಾಟೀಲ

Friday, June 25th, 2021
CC Pateel

ಗದಗ : ಜಿಲ್ಲೆಯಲ್ಲಿ ಕೋರೊನಾ ಸೋಂಕು ಸದ್ಯಕ್ಕೆ ನಿಯಂತ್ರಣದಲ್ಲಿ ಹಾಗಂತ ಜನತೆ ಮೈಮರೆಯಬಾರದು. ಸೋಂಕು ಹರಡುವಿಕೆ ತಡೆಗೆ ಸರ್ಕಾರ ಸೂಚಿಸಿದ ಕ್ರಮ ಎಲ್ಲರೂ ಪಾಲಿಸುವದರೊಂದಿಗೆ ಜೀವಹಾನಿ ತಡೆಯಬೇಕು ಎಂದು ಸಣ್ಣ ಕೈಗಾರಿಕೆ, ವಾರ್ತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಹೇಳಿದರು. ಗದಗ ತಾಲ್ಲೂಕಿನ ಅಡವಿ ಸೋಮಾಪುರ ದೊಡ್ಡತಾಂಡಾದಲ್ಲಿ ಗುರುವಾರ 2020-21ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಮಂಜೂರಾದ ಸಭಾಭವನ ಶಂಕುಸ್ಥಾಪನೆ ನೆರವೇರಿಸಿ ಸಚಿವ ಸಿ.ಸಿ.ಪಾಟೀಲ ಅವರು ಮಾತನಾಡಿದರು. ಸಭಾಭವನ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಕುಡಿರುವಂತೆ […]

ಮುಖ್ಯಮಂತ್ರಿಗಳಿಂದ ದ್ವಿಪಥ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನೆ

Friday, June 25th, 2021
Yashavathpura Train

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ಮತ್ತು ರೈಲು ಮಾರ್ಗ ಡಬಲಿಂಗ್ ಯೋಜನೆಗಳ ಪ್ರಗತಿ ಪರಿಶೀಲಿಸಿದರು. ಬೆಂಗಳೂರು ಕಂಟೋನ್ಮೆಂಟ್ ನಿಂದ ಹೀಲಲಿಗೆ ನಡುವೆ ಸಂಚರಿಸಿ ಈ ಎರಡೂ ಯೋಜನೆಗಳ ತಪಾಸಣೆಯನ್ನು ನಡೆಸಿದ ಅವರು ಸಬ್ ಅರ್ಬನ್ ಯೋಜನೆಯಿಂದ ಬೆಂಗಳೂರು ನಗರದ ಹೊರವಲಯದ ಉಪನಗರಗಳು ಹಾಗೂ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದೊಂದಿಗೆ ಸಾರಿಗೆ ಸಂಪರ್ಕ ಸುಲಭವಾಗಲಿದೆ. ನಗರದ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆಯೂ ಇದೆ ಎಂದರು. ರೈಲ್ವೆ ಡಬಲಿಂಗ್ ಯೋಜನೆಗಳಿಂದ […]