ರಾಜ್ಯದ ಎಲ್ಲಾ ಶಾಲೆ ಕಾಲೇಜುಗಳಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ 

Tuesday, January 18th, 2022
CM Bommai

ಬೆಂಗಳೂರು: ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆ. ಹೀಗಾಗಿ ಸುಭಾಷ ಚಂದ್ರ ಬೋಸ್ ಅವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಬೆಂಗಳೂರಿನಲ್ಲಿ ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ( ಜನವರಿ 23) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ […]

ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿಗೆ ಚತುರ್ಥಪರ್ಯಾಯದ ಸಂಭ್ರಮ

Tuesday, January 18th, 2022
Paryaya

ಉಡುಪಿ:  ಉಡುಪಿ ಶ್ರೀ ಕೃಷ್ಣ ಮಠದ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರು  ತನ್ನ ಚತುರ್ಥಪರ್ಯಾಯದ ಗದ್ದುಗೆಯನ್ನೇರಿದರು. ಉಡುಪಿ ಶ್ರೀಕೃಷ್ಣ ಮಠದ ಪೂಜಾಧಿಕಾರ ಹಸ್ತಾಂತರ ಸಮಾರಂಭದಲ್ಲಿ, ಪ್ರಸ್ತುತ ಪರ್ಯಾಯ ಪೀಠಾಧಿಪತಿಗಳಾದ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ, ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿಗೆ ಪೊಡವಿಗೊಡೆಯ ಶ್ರೀಕೃಷ್ಣನ ಪೂಜಾಧಿಕಾರವನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಿದರು. 2 ವರ್ಷಕ್ಕೊಮ್ಮೆ ನಡೆಯುವ ಈ ಸಮಾರಂಭದಲ್ಲಿ ಮಂಗಳವಾರ  ನಸುಕಿನ ಜಾವ 5.25ಕ್ಕೆ ಶ್ರೀಕೃಷ್ಣಮಠ ಪ್ರವೇಶ ಮಾಡಿ ದೇವರ ದರ್ಶನ ಪಡೆದ ಶ್ರೀಗಳಿಗೆ ಪರ್ಯಾಯ ಅದಮಾರು ಮಠದ ಶ್ರೀ […]

ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Thursday, January 6th, 2022
Karnataka PUBoard

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿದೆ ಎಂದು ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ. ಮಾರ್ಚ್ 28 ರಂದು ಪ್ರಥಮ ಭಾಷೆ –ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಮಾರ್ಚ್ 30 ದ್ವಿತೀಯ ಭಾಷೆ –ಇಂಗ್ಲಿಷ್, ಕನ್ನಡ, ಏಪ್ರಿಲ್ 1 ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ಸಮಾಜ ವಿಜ್ಞಾನ, ಏಪ್ರಿಲ್ 8 […]

ಪಿಲಿಕುಳ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ 9 ವರ್ಷ ಪ್ರಾಯದ ಹುಲಿ ಸಾವು

Tuesday, January 4th, 2022
Tiger oliver

ಮಂಗಳೂರು: ಆರೋಗ್ಯವಂತ ಹಾಗೂ ಸದೃಢವಾಗಿದ್ದ 9 ವರ್ಷ ಪ್ರಾಯದ ಹುಲಿಯೊಂದು ಮಂಗಳವಾರ ಮುಂಜಾನೆ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ಮೃತಪಟ್ಟಿದೆ. ಮುಂಜಾನೆವರೆಗೂ ಚುರುಕಾಗಿಯೇ ಇದ್ದು ಒಮ್ಮಿಂದೊಮ್ಮೆಲೇ ಕುಸಿದು ಬಿದ್ದಿದೆ. ಜೀವ ಉಳಿಸಲು ಮೃಗಾಲಯದ ವೈದ್ಯಾಧಿಕಾರಿಗಳು ಮಾಡಿದ ಪ್ರಯತ್ನ ಫಲಪ್ರದವಾಗಲಿಲ್ಲ.   ಈ ಹುಲಿಯ ಹೆಸರು ಒಲಿವರ್‌. ಇದು ವಿಕ್ರಂ ಹಾಗೂ ಶಾಂಭವಿ ಹುಲಿ ಜೋಡಿಗೆ ಜನಿಸಿದ್ದ ಎರಡು ಮರಿಗಳಲ್ಲೊಂದು. ಇದರ ಪ್ರಾಯ 9 ವರ್ಷ ಆಗಿತ್ತು. ಮೃತಪಟ್ಟ ಹುಲಿಯ ಅಂಗಾಂಗಗಳ ಮಾದರಿಯನ್ನು ಬೆಂಗಳೂರಿನ ಪ್ರಾಣಿ ಆರೋಗ್ಯ […]

ಕಾಂಗ್ರೆಸ್ ಗೂಂಡಾ ವರ್ತನೆ : ಸಚಿವ ಅಶೋಕ್ ಖಂಡನೆ

Monday, January 3rd, 2022
R Ashoka

ಬೆಂಗಳೂರು  : ರಾಮನಗರ ಜಿಲ್ಲೆಯಲ್ಲಿ ಸರ್ಕಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ತೋರಿದ ವರ್ತನೆ ಅವರಿಗೆ ಗೌರವ ತರುವಂತದ್ದಲ್ಲ. ಮಾನ್ಯ ಮುಖ್ಯಮಂತ್ರಿಗಳು ಇರುವ ವೇದಿಕೆಯಲ್ಲಿಯೇ ಅಗೌರವದಿಂದ ನಡೆದುಕೊಂಡಿದ್ದಾರೆ. ದೇವರಾಜ್ ಅರಸು ಕಾಲದಿಂದಲೂ ಕಾಂಗ್ರೆಸ್ ನಲ್ಲಿ ಗೂಂಡಾ ಸಂಸ್ಕೃತಿ ಇದೆ. ಈ ಘಟನೆಯಿಂದ ಕಾಂಗ್ರೆಸ್ ನಿಜವಾದ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯಾದ್ಯಂತ ಇದೇ ರೀತಿಯಲ್ಲಿ ವ್ಯವಹರಿಸುತ್ತದೆ. ಈ ರೀತಿಯ ತೋಳ್ಬಲಕ್ಕೆ ಮುಂದಾದರೆ ಸಾರ್ವಜನಿಕರೇ ತಕ್ಕಶಾಸ್ತಿ ಮಾಡುತ್ತಾರೆ.  ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ಕೋವಿಡ್ ತೊಲಗಿಸಲು ಪಣ ತೋಡೋಣ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

Monday, January 3rd, 2022
cm Bommai

ಬೆಂಗಳೂರು : 2022ನ್ನು ಆರೋಗ್ಯಭರಿತ ಹಾಗೂ ಕೋವಿಡ್ ಮುಕ್ತ ವರ್ಷವನ್ನಾಗಿ ಮಾಡಲು ಸಂಕಲ್ಪ ತೋಡೋಣ. ಕೋವಿಡ್ ವಿರುದ್ದ ಒಟ್ಟಾಗಿ ಸಮರವನ್ನು ಸಾರಿ ತೊಲಗಿಸಲು ಪಣ ತೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಅವರು ಇಂದು ಅವರು ಇಂದು ಭೈರವೇಶ್ವರನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಸ್ನಾತಕೋತ್ತರ ಕಾಲೇಜಿನಲ್ಲಿ 15-18 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಅತ್ಯಂತ ಯಶಸ್ವಿಯಾಗಿ ಕೋವಿಡ್ ನ್ನು […]

ಕಾರ್ಯಕ್ರಮದ ವೇದಿಕೆಯಲ್ಲಿ ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸಂಸದ‌ ಡಿ.ಕೆ.‌ ಸುರೇಶ್ ಹೊಡೆದಾಟ

Monday, January 3rd, 2022
Ramanagar

ರಾಮನಗರ: ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಎದುರೇ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸಂಸದ‌ ಡಿ.ಕೆ.‌ ಸುರೇಶ್ ಹೊಡೆದಾಟಕ್ಕೆ ಮುಂದಾದ‌ ಘಟನೆ ರಾಮನಗರದಲ್ಲಿ ನಡೆಯಿತು. ರಾಮನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಸೋಮವಾರ ನಡೆದ ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ವೇಳೆ ವೇದಿಕೆಯಲ್ಲಿ ಅಶ್ವತ್ಥನಾರಾಯಣರ ಮಾತಿನಿಂದ ಕೆರಳಿದ‌ ಸುರೇಶ್ ಅವರತ್ತ ನುಗ್ಗಿದರು. ಅತ್ತ ಅಶ್ವತ್ಥನಾರಾಯಣ ಸಹ‌ ಕೆರಳಿದರು. ನಂತರ ಇಬ್ಬರು‌ ಕೈ ಕೈ ಮಿಲಾಯಿಸಲು ಮುಂದಾದರು. ವಿಧಾನ‌ ಪರಿಷತ್ ಸದಸ್ಯ ಎಸ್. ರವಿ ಮೈಕ್ ನಲ್ಲಿ‌ […]

ಅವಿಶ್ರಮಿತವಾಗಿ ದಣಿವರಿಯದೇ ಕೆಲಸ ಮಾಡುವ ಶಕ್ತಿ ನನ್ನಲಿದೆ: ಸಿಎಂ ಬಸವರಾಜ ಬೊಮ್ಮಾಯಿ

Tuesday, December 28th, 2021
Hubballi

ಹುಬ್ಬಳ್ಳಿ : ವರ್ಷದ 365 ದಿನಗಳು ಅವಿಶ್ರಮಿತವಾಗಿ ದಣಿವರಿಯದೇ ಕೆಲಸ ಮಾಡುವ ಶಕ್ತಿ, ಸ್ಪೂರ್ತಿ ನನ್ನಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ಕೆಲಸಮಯ ವಿಶ್ರಮಿಸಬೇಕೆನ್ನುವ ಎಂ.ಪಿ.ಕುಮಾರಸ್ವಾಮಿಯವರ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿ, ನಾನು ದಣಿವರಿಯದೇ ಕೆಲಸ ಮಾಡುವ ಶಕ್ತಿ ಹೊಂದಿದ್ದೇನೆ. ದಿನದಲ್ಲಿ ಕನಿಷ್ಟ 15 ತಾಸು ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ. 2023ರ ಚುನಾವಣೆಯಲ್ಲಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ […]

ದೇಶದಲ್ಲಿ ಮತ್ತೊಂದು ಅವಗಢ : ಕೋಡಿಮಠದ ಸ್ವಾಮೀಜಿ ಭವಿಷ್ಯ

Friday, December 24th, 2021
Kodimatha

ರಾಣೆಬೆನ್ನೂರ: ಸಂಕ್ರಾತಿಯೊಳಗೆ ಮತ್ತೊಂದು ರಾಜಕೀಯ ಅವಘಡ ಸಂಭವಿಸುವ ಲಕ್ಷಣವಿದೆ. ಇದರಿಂದ ಜಗತ್ತು ತಲ್ಲಣಗೊಳ್ಳಲಿದೆ ಎಂದು ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ನಗರಕ್ಕೆ ಶುಕ್ರವಾರ ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ಆಗಮಿಸಿದ ಅವರು ಮಾಧ್ಯಮದರೊಂದಿಗೆ ಮಾತನಾಡಿ, ನಾನು ಈ ಹಿಂದೆಯೇ ದೊಡ್ಡಮಟ್ಟದ ಅವಘಡ ಸಂಭವಿಸುವ ಕುರಿತು ಹೇಳಿದ್ದೆ. ಅದರಂತೆ ಭಾರತೀಯ ಸೇನೆಯ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ ಪ್ರಕರಣ ನಡೆದು ಹೋಯಿತು. ಮೊನ್ನೆ ನಡೆದ ಭಾರತೀಯ ಸೇನೆಯ ಮುಖ್ಯಸ್ಥರ ಅವಘಡದಂತೆ  ಮತ್ತೆ ಅಂಥದ್ದೇ ದುರಂತ ಸಂಭವಿಸುವ […]

ವಿಪಕ್ಷಗಳ ಗದ್ದಲದ ನಡುವೆಯೇ ಮತಾಂತರ ತಡೆ ವಿಧೇಯಕ ಅಂಗೀಕಾರ

Thursday, December 23rd, 2021
Conversion-bill

ಬೆಳಗಾವಿ : ಎರಡು ದಿನಗಳ ವಾದ-ವಿವಾದಗಳ ಬಳಿಕ ಇಂದು ಸುದೀರ್ಘವಾಗಿ ನಡೆದ ಚರ್ಚೆಯಲ್ಲಿ  ಮತಾಂತರ ತಡೆ ವಿಧೇಯಕ ಅಂಗೀಕಾರ ಆಗಿದೆ. 2016ರಲ್ಲಿ ಕಾನೂನು ಆಯೋಗ ಸಿದ್ಧಪಡಿಸಿದ್ದ ಮತಾಂತರ ನಿಷೇಧ ವಿಧೇಯಕದ ಕರಡು ಪ್ರತಿಗೆ ಅಂದಿನ ಕಾನೂನು ಸಚಿವ ಟಿ.ಬಿ. ಜಯಚಂದ್ರ ಒಪ್ಪಿಗೆ ನೀಡಿದ್ದನ್ನು ಬಿಜೆಪಿ ಪ್ರದರ್ಶಿಸಿತು. ಅಷ್ಟೇ ಅಲ್ಲ, ಆ ಪ್ರತಿಗೆ ಅಂದಿನ ಸಿಎಂ ಸಿದ್ದರಾಮಯ್ಯ ಕರಡು ಪ್ರತಿ ಒಪ್ಪಿ ಕ್ಯಾಬಿನೆಟ್ಗೆ ಕಡತ ಮಂಡಿಸುವಂತೆ ಸಹಿ ಮಾಡಿದ್ದರ ಬಗ್ಗೆ ಸಚಿವ ಮಾಧುಸ್ವಾಮಿ ಹೇಳುತ್ತಿದ್ದಂತೆ, ಇದಕ್ಕೆ ಉತ್ತರಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಕಕ್ಕಾಬಿಕ್ಕಿಯಾದ […]