ಪಂಪ್’ವೆಲ್’ನಿಂದ ಕಣ್ಣೂರುವರೆಗೆ ಸಾಗಿದ ಕಾಂಗ್ರೆಸ್ ರೋಡ್ ಶೋ

Wednesday, April 24th, 2024
congress-road-show

ಮಂಗಳೂರು: ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್’ವೆಲ್’ನಿಂದ ಕಣ್ಣೂರುವರೆಗೆ ರೋಡ್ ಶೋ ಜರಗಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜಾ, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್, ಕೇಶವ ಮರೋಳಿ, ನವೀನ್ ಡಿಸೋಜಾ, ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ದಾಸ್, ಪ್ರಮುಖರಾದ ಯು.ಟಿ. ಫರ್ಜಾನ್, ರವಿರಾಜ್ ಪೂಜಾರಿ, ರಮಾನಂದ್ ಪೂಜಾರಿ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ ಮೊದಲಾದವರು […]

ಮತದಾನಕ್ಕೆ ಸಕಲ ಸಿದ್ದತೆ – ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 1,876 ಮತಗಟ್ಟೆಗಳು, ಒಟ್ಟು 18,18,127 ಮಂದಿ ಮತದಾರರು

Tuesday, April 23rd, 2024
ಮತದಾನಕ್ಕೆ ಸಕಲ ಸಿದ್ದತೆ - ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 1,876 ಮತಗಟ್ಟೆಗಳು, ಒಟ್ಟು 18,18,127 ಮಂದಿ ಮತದಾರರು

ಮಂಗಳೂರು : ಏಪ್ರಿಲ್ 26ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣಾ ಮತದಾನಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಏ. 23ರ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಜಿಲ್ಲೆಯಾದ್ಯಂತ 1,876 ಮತಗಟ್ಟೆಗಳಿದ್ದು, 524 ಸರ್ವಿಸ್ ವೋಟರ್ ಗಳು ಸೇರಿದಂತೆ ಒಟ್ಟು 18,18,127 ಮಂದಿ ಮತದಾರರಿದ್ದಾರೆ. 2,251 ಪ್ರಿಸೈಡಿಂಗ್ ಅಧಿಕಾರಿಗಳು, 2,251 ಎಪಿಆರ್‌ಓಗಳು, […]

ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನಸು ; ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ

Tuesday, April 23rd, 2024
BJP-memorandum

ಮಂಗಳೂರು : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿದ್ದು, ಪ್ರಧಾನಿ ಮೋದಿಯವವರ ವಿಕಸಿತ ಭಾರತಕ್ಕೆ ಪೂರಕವಾಗಿ ಒಂಬತ್ತು ಅಂಶಗಳ ನವಯುಗ ನವಪಥ ಎನ್ನುವ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. ನವಯುಗ ನವಪಥ ಎನ್ನುವ ಕಾರ್ಯಸೂಚಿಗಳ ಪಟ್ಟಿಯನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕ್ಯಾ.ಬ್ರಿಜೇಶ್ ಚೌಟ, ಈಗಾಗಲೇ ಕೈಗೆತ್ತಿಕೊಂಡಿರುವ […]

ತನ್ನದೇ ಪಕ್ಷದ ಕಾರ್ಪೊರೇಟರ್‌ ಪುತ್ರಿ ನೇಹಾ ಕೊಲೆಯಾದರೂ ಕಾಂಗ್ರೆಸ್‌ ಸರ್ಕಾರ ಅವರಿಗೆ ಧೈರ್ಯ ತುಂಬಿಲ್ಲ : ನಳಿನ್‌ ಕುಮಾರ್‌

Tuesday, April 23rd, 2024
Nalin-kumar-Kateel

ಮಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕುಟುಂಬಸ್ಥರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಬೇಕು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಳಿನ್, ಅವರದೇ ಪಕ್ಷದ ಕಾರ್ಪೊರೇಟರ್‌ ಪುತ್ರಿ ನೇಹಾ ಕೊಲೆಯಾದರೂ ಕಾಂಗ್ರೆಸ್‌ ಸರ್ಕಾರ, ಮುಖಂಡರು ನೇಹಾ ಕುಟುಂಬಕ್ಕೆ ಇದುವರೆಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಆತಂಕದ ವಾತಾವರಣ ಸೃಷ್ಟಿಯಾಗುತ್ತಿದೆ ಎಂದರು. ಹಿಂದೂಗಳ ಮೇಲೆ ಹಲ್ಲೆ, ಹತ್ಯೆಗಳು ನಡೆಯುತ್ತಿವೆ. […]

ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ 6 ವರ್ಷ ಅಮಾನತು

Monday, April 22nd, 2024
eshwarappa

ಬೆಂಗಳೂರು : ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಯಜೇಂದ್ರ ಮನವಿ ಮಾಡಿದ್ದರು. ಆದರೆ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಬಂಡಾಯ ಎದ್ದಿರುವ ಈಶ್ವರಪ್ಪ ಮನವೊಲಿಕೆಗೆ ಕೇಂದ್ರ ನಾಯಕರ ತಂಡ, ರಾಜ್ಯ ನಾಯಕರು, ಸ್ಥಳೀಯರ ಮುಖಂಡರು ಯತ್ನಿಸಿದ್ದರೂ ಯಾವುದೇ ಪ್ರಯೋಜವಾಗಿರಲಿಲ್ಲ. ಇತ್ತೀಚೆಗೆ ಬಿಜೆಪಿ ಉಸ್ತುವಾರಿ ರಾಧಾ […]

ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದ ಕಾಡಿನಲ್ಲಿ ತಲೆಬುರುಡೆ ಹಾಗೂ ಚೀಲ ಪತ್ತೆ

Sunday, April 21st, 2024
skeletal

ಸುಳ್ಯ : ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ. 19 ರಂದು ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಕಾಡಿನಿಂದ ಕಟ್ಟಿಗೆ ತರಲು ಹೋಗುತ್ತಿದ್ದರು. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಮೀಸಲು ಅರಣ್ಯದ ಕಡೆಗೆ ಹೋಗುತ್ತಿದ್ದಾಗ ದಾರಿ ಬದಿಯಲ್ಲಿ ಕೊಳೆತ ತಲೆಬುರುಡೆ ಮತ್ತು ಚೀಲ ಪತ್ತೆಯಾಗಿದೆ. ಸ್ವಲ್ಪ ದೂರದಲ್ಲಿ ಮರದ ಕೊಂಬೆಗೆ ಬಟ್ಟೆ ನೇತಾಡುತ್ತಿತ್ತು. […]

ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಶೇ.60 ರಷ್ಟು ಮತದಾನ

Friday, April 19th, 2024
vote-1st phase

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದ್ದು ವಿವಿಧ ರಾಜ್ಯಗಳ 102 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ.60 ರಷ್ಟು ಮತದಾನವಾಗಿದೆ. ತಮಿಳುನಾಡಿನಲ್ಲಿ ಶೇ.63.2, ರಾಜಸ್ಥಾನದಲ್ಲಿ ಶೇ.50.3, ಉತ್ತರ ಪ್ರದೇಶದಲ್ಲಿ ಶೇ.57.5 ಮತ್ತು ಮಧ್ಯಪ್ರದೇಶದಲ್ಲಿ ಶೇ.63.3ರಷ್ಟು ಮತದಾನವಾಗಿದೆ. ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಮತದಾನವಾಗಿದ್ದು, ಶೇ. 77.57 ರಷ್ಟು ವೋಟಿಂಗ್ ಆಗಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದು ಮತದಾನ ನಡೆದು, ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ. ಮತದಾನ ಮುಕ್ತಾಯಗೊಂಡಾಗ ಸುಮಾರು ಶೇ.60 ರಷ್ಟು ಮತದಾನವಾಗಿದೆ […]

ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ ಪ್ರೋತ್ಸಾಹ -ಕ್ಯಾ.ಬ್ರಿಜೇಶ್ ಚೌಟ ಖಂಡನೆ

Friday, April 19th, 2024
Brijesh-Chowta

ಮಂಗಳೂರು : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ದ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್ ಡಿಪಿಐ ಜತೆ ಕೈಜೋಡಿಸಿರುವ ಕಾಂಗ್ರೆಸ್ ಜಿಹಾದಿಗಳಿಗೆ ಪ್ರೋತ್ಸಾಹ ನೀಡುವ ಹೀನಕೃತ್ಯಕ್ಕೆ ಇಳಿದಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಿಂದೂಗಳು ಸದಾ ಆತಂಕದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಹಲ್ಲೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ನ ಈ ನೀಚ […]

ಎಡಪದವು ಬಳಿ ಲಾರಿ ಬ್ರೇಕ್ ಫೇಲ್ ಆಗಿ ಹಲವು ವಾಹನಗಳು ಜಖಂ

Friday, April 19th, 2024
yedapadavu -accident

ಬಜ್ಪೆ : ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಬೃಹತ್ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಖಾಸಗಿ ಬಸ್, ಲಾರಿ ಮತ್ತು ಹಲವು ವಾಹನಗಳಿಗೆ ಗುದ್ದಿ ಪಲ್ಟಿಯಾದ ಘಟನೆ ಬಜ್ಪೆ ಎಡಪದವು ಪೇಟೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬ್ರೇಕ್ ಫೇಲ್ ಆದ ಲಾರಿಯನ್ನು ನಿಲ್ಲಿಸಲಾಗದೇ ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ಸ್ವಿಫ್ಟ್ ಕಾರು‌ ಜಖಂಗೊಂಡಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಬಳಿಕ ಎಣ್ಣೆ ಪೂರೈಕೆ ಮಾಡುತ್ತಿದ್ದ ಪಿಕ್ಅಫ್ ವಾಹನಕ್ಕೆ ಡಿಕ್ಕಿ ಹೊಡೆದ […]

ಲೋಕಸಭಾ ಚುನಾವಣೆ ; 24 ರಿಂದ ಪ್ರತಿಬಂಧಕಾಜ್ಞೆ ಜಾರಿ

Friday, April 19th, 2024
mullai-muhilan

ಮಂಗಳೂರು : ಭಾರತೀಯ ಸಾರ್ವತ್ರಿಕ ಲೋಕಸಭಾ ಚುನಾವಣಾ ಹಿನ್ನಲೆ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24 ಬುಧವಾರ ಸಂಜೆ 6 ಗಂಟೆಯಿಂದ ಏ.26 ಶುಕ್ರವಾರ ರಾತ್ರಿ 10 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ / ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ […]