ಕಾಂಗ್ರೆಸ್ ನ ಶಾಸಕರು ಬಿಜೆಪಿಗೆ ಬರುತ್ತಾರೆ, ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ಸುಭದ್ರವಾಗಿದೆ : ಡಿಸಿಎಂ ಅಶ್ವಥ್ ನಾರಾಯಣ್

Monday, February 24th, 2020
DCM

ಕಲಬುರಗಿ : ಬಿಜೆಪಿಯ 32 ಶಾಸಕರು ಶೀಘ್ರ ರಾಜೀನಾಮೆ ಎನ್ನುವ ಸಿಎಂ ಇಬ್ರಾಹಿಂ ಹೇಳಿಕೆಗೆ  ಡಿಸಿಎಂ ಅಶ್ವಥ್ ನಾರಾಯಣ್ ಲೇವಡಿ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ 32 ಶಾಸಕರು ಬಿಜೆಪಿಗೆ ಬರ್ತಾರೆ ಅಂತ ಸಿಎಂ ಇಬ್ರಾಹಿಂ ಹೇಳಿರಬೇಕು. ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ಸುಭದ್ರವಾಗಿದೆ. ಮೂರು ವರ್ಷ ಮೂರು ತಿಂಗಳು ಕಾಲ ಆಡಳಿತ ಪೂರ್ಣಗೊಳಿಸುತ್ತೇವೆ ಎಂದರು. ರಾಜ್ಯದಲ್ಲಿ ಮತ್ತೆ 2023ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸರಕಾರ ಅವಧಿ […]

ಬಿಎಸ್​ ಯಡಿಯೂರಪ್ಪ ಮೂರು ವರ್ಷ ಅಧಿಕಾರ ನಡೆಸಲಿ : ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾರೈಕೆ

Wednesday, February 19th, 2020
devengowda

ಬೆಂಗಳೂರು : ಯಡಿಯೂರಪ್ಪ ಮೂರು ವರ್ಷಗಳು ಅಧಿಕಾರ ನಡೆಸಲಿ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾರೈಸಿದ್ದಾರೆ. ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ರಚನೆಯಾಗಿರುವ ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಮೂರು ವರ್ಷಗಳ ಪೂರ್ಣಾವಧಿ ಅಧಿಕಾರ ನಡೆಸಲಿ ಎಂಬುದು ನಮ್ಮ ಹಾರೈಕೆ. ಇದರಿಂದ ನಮಗೆ ಪಕ್ಷ ಕಟ್ಟಲು ಅವಕಾಶ ಸಿಗುತ್ತದೆ ಎಂದು ಹೇಳಿದರು. ಮೈತ್ರಿ ಸರ್ಕಾರ ಪತನದ ಬಳಿಕ ಜಿಟಿಡಿ ಅವರು ಯಡಿಯೂರಪ್ಪ ಮನೆಗೆ ಹೋಗಿದ್ದಾರೆ. ಕ್ಷೇತ್ರದ ಕೆಲಸ ಮಾಡಲು ಉಪಮುಖ್ಯಮಂತ್ರಿಗಳ ನೆರವು ಬೇಕೆಂದಿದ್ದಾರೆ. ಅವರು ಕಾಂಗ್ರೆಸ್ಗೆ ಹೋಗುತ್ತಾರೋ, […]

ತಪಸ್ ಪಾಲ್ ಸಾವಿಗೆ ಕೇಂದ್ರ ಸರ್ಕಾರದ ಪ್ರತೀಕಾರದ ರಾಜಕೀಯ ನೀತಿಯೇ ಕಾರಣ : ಸಿಎಂ ಮಮತಾ ಬ್ಯಾನರ್ಜಿ

Wednesday, February 19th, 2020
mamatha-banarji

ಕೋಲ್ಕತಾ : ಮಾಜಿ ತೃಣಮೂಲ ಕಾಂಗ್ರೆಸ್ ಸಂಸದ ತಪಸ್ ಪಾಲ್ ಸಾವಿಗೆ ಕೇಂದ್ರ ಸರ್ಕಾರವೇ ಕಾರಣ, ಕೇಂದ್ರ ಸರ್ಕಾರ ಪ್ರತೀಕಾರದ ರಾಜಕಾರಣ ನಡೆಸುತ್ತಿದ್ದು ಇವರ ಒತ್ತಡದಿಂದಾಗಿ ತಪಸ್ ಸೇರಿದಂತೆ ತೃಣಮೂಲ ಕಾಂಗ್ರೆಸ್ ಪಕ್ಷದ ಮೂರು ಜನ ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಾ ಪ್ರಹಾರ ನಡೆಸಿದ್ದಾರೆ. ಮಾಜಿ ಸಂಸದ ತಪಸ್ ಪಾಲ್ ಸಾವಿಗೆ ಸಂತಾಪ ಸೂಚಿಸಿ ಮಾತನಾಡಿರುವ ತಪಸ್ ಪಾಲ್, “ಬಿಜೆಪಿ ಮತ್ತು ಸಿಬಿಐ ಪಶ್ಚಿಮ ಬಂಗಾಳದ ವಿರುದ್ಧ ಪ್ರತೀಕಾರವೆಂಬ ಕೊಳಕು ಆಟವಾಡುತ್ತಿದೆ. […]

ಮಹಾರಾಷ್ಟ್ರದ ಉದ್ಧವ್‌ ಠಾಕ್ರೆ ನೇತೃತ್ವದ ಸರಕಾರ ಅಸ್ವಾಭಾವಿಕ, ಅವಾಸ್ತವಿಕದ್ದು : ಜೆ.ಪಿ. ನಡ್ಡಾ

Monday, February 17th, 2020
JP-Nadda

ಮುಂಬಯಿ : ಮಹಾರಾಷ್ಟ್ರದ ಉದ್ಧವ್‌ ಠಾಕ್ರೆ ನೇತೃತ್ವದಲ್ಲಿನ ಸರಕಾರ ಅಸ್ವಾಭಾವಿಕ, ಅವಾಸ್ತವಿಕ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ಮುಂಬಯಿನಲ್ಲಿ ಪಕ್ಷದ ಕಾರ್ಯರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-ಎನ್‌ಸಿಪಿ- ಶಿವಸೇನೆ ಮೈತ್ರಿ ಕೂಟ ರಾಜ್ಯದ ಅಭಿವೃದ್ಧಿಗೆ ತಡೆಯಾಗಿದೆ ಎಂದು ದೂರಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ಪಕ್ಷಕ್ಕೆ ಉತ್ತಮ ಸ್ಥಾನಗಳು ಬಂದಿದ್ದರೂ ಕೆಲವರ ವೈಯಕ್ತಿಕ ಹಿತಾಸಕ್ತಿಗಳಿಂದಾಗಿ ಸರಕಾರ ರಚನೆ ಸಾಧ್ಯವಾಗಿರಲಿಲ್ಲ. ಮುಂಬರುವ ಚುನಾವಣೆಗಾಗಿ ಪಕ್ಷ ಸ್ವಯಂ ಶಕ್ತಿಯಿಂದ ಸ್ಪರ್ಧಿಸಲು ಈಗಿನಿಂದಲೇ ಸಿದ್ಧಗೊಳ್ಳಬೇಕು. ‘ಬಿಜೆಪಿ ವರ್ಸಸ್‌ ಎಲ್ಲರೂ’ ಎಂಬಂಥ ಸ್ಪರ್ಧೆಗೆ ಅಣಿಯಾಗಬೇಕು. […]

ಮೀಸಲಾತಿ ಗೊಂದಲ : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Monday, February 17th, 2020
cog.pratibhatane

ಮಡಿಕೇರಿ : ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಇದ್ದ ಮೀಸಲಾತಿಯ ಹಕ್ಕನ್ನು ದುರ್ಬಲಗೊಳಿಸಲು ಹೊರಟಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೀಸಲಾತಿ ಪ್ರತಿಪಾದನೆ ಕುರಿತು ಸರ್ಕಾರ ಮತ್ತೆ ಸುಪ್ರೀಂಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ […]

ಖಾತೆ ಹಂಚಿಕೆಯಲ್ಲಿ ಅಸಮಾಧಾನ ಇಲ್ಲ : ಸಚಿವ ನಾರಾಯಣ ಗೌಡ ಸ್ಪಷ್ಟನೆ

Saturday, February 15th, 2020
narayana-gowda

ಬೆಂಗಳೂರು : ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನವಿದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವಿವಾದಕ್ಕೆ ಸ್ಪಷ್ಟನೆ ನೀಡಿರುವ ಪೌರಾಡಳಿತ ಸಚಿವ ನಾರಾಯಣ ಗೌಡ ತಮಗೆ ಕೊಟ್ಟಿರುವ ಖಾತೆಗಳ ಬಗ್ಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಂದು ಬೆಳಗ್ಗೆ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳು ಈ ವಿಚಾರ ಪ್ರಸ್ತಾಪಿಸಿದಾಗ ಗಲಿಬಿಲಿಗೊಂಡ ಸಚಿವ ನಾರಾಯಣ ಗೌಡ ನನಗೆ ಕೊಟ್ಟಿರುವ ಖಾತೆಯಲ್ಲಿ ಅಸಮಾಧಾನವಿದೆ ಅಂತ ಯಾರು ಹೇಳಿದ್ದು ಎಂದು ಪ್ರಶ್ನಿಸಿದರು. ನಾನು ಮುಖ್ಯಮಂತ್ರಿಗಳು ಕೊಟ್ಟ ಖಾತೆಯನ್ನ […]

ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ನೀಡುವಂತೆ ಡಿಸಿಎಂ ಗೆ ಮನವಿ

Saturday, February 15th, 2020
dcm

ಮಡಿಕೇರಿ : ಕನಾ೯ಟಕ ಬೆಳೆಗಾರರ ಒಕ್ಕೂಟದ ಮಾಜಿ ಅಧ್ಯಕ್ಷ ಬಿ.ಎಸ್.ಜೈರಾಂ ನೇತೃತ್ವದಲ್ಲಿ ಕನಾ೯ಟಕ ಬೆಳೆಗಾರರ ಒಕ್ಕೂಟದ ನಿಯೋಗವು ರಾಜ್ಯ ಸಕಾ೯ರದ ಉಪಮುಖ್ಯಮಂತ್ರಿ ಡಾ|| ಅಶ್ವಥ ನಾರಾಯಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. 2017-18 ರ ಬಜೆಟ್ ನಲ್ಲಿ ಸಕಾ೯ರಿ ಭೂಮಿಯನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ರೂಪುಗೊಂಡ ಕರುಡು ನಿಯಮಗಳು ಬೆಳೆಗಾರರ ಪರವಾಗಿ ಇಲ್ಲ. ಎಲ್ಲಾ ಬೆಳೆಗಾರರ ಹಿತದೃಷ್ಟಿಯಿಂದ ಕನಾ೯ಟಕ ಬೆಳೆಗಾರರ ಒಕ್ಕೂಟದ ಸಲಹೆಗಳನ್ನು ಪರಿಗಣಿಸಿ, ಸಕಾ೯ರಿ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ಕೊಡಗು, ಚಿಕ್ಕಮಗಳೂರು, […]

ಮುಂದಿನ ನಾಲ್ಕು ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ

Saturday, February 15th, 2020
basana-gowda-yathnal

ವಿಜಯಪುರ : ರಾಜ್ಯ ರಾಜಕೀಯಲ್ಲಿ ಭಾರೀ ಬದಲಾವಣೆಯಾಗಲಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಈ ಬದಲಾವಣೆ ಕಾಣಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನ ಬಳಿಕ ಸಂಪುಟ ಪುನಾರಚನೆಯಾಗಲಿದ್ದು, ಸಚಿವ ಸಂಪುಟ ಬದಲಾವಣೆ ಮಾಡಲೇಕಾಗುತ್ತದೆ. ಈ ಬಗ್ಗೆ ಹೈಕಮಾಂಡ್ ಒಳ್ಳೆಯ ನಿರ್ಧಾರ ಕೈಗೊಳ್ಳಬಹುದು ಎಂಬ ನಿರೀಕ್ಷೆ ಇದೆ ಎಂದಿದ್ದಾರೆ. ಸಚಿವ ಸ್ಥಾನಕ್ಕಾಗಿ ಈಗಾಗಲೇ ಪಕ್ಷದಲ್ಲಿ ಹಿರಿಯ ನಾಯಕರು ಅಸಮಾಧಾನ ತೋರಿದ್ದಾರೆ. ಸಿಎಂ ಸಂಪುಟ ಪುನಾರಚನೆ ಮಾಡಬೇಕು ಎಂದು‌ ಗಂಭೀರ […]

ಬಿಜೆಪಿ ಪಕ್ಷದಲ್ಲಿ ಉಮೇಶ್​ ಕತ್ತಿ ಬಹಳ ಹಿರಿಯರಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದೇ ನನ್ನ ಆಗ್ರಹ : ಸಚಿವ ರಮೇಶ್​ ಜಾರಕಿಹೊಳಿ

Friday, February 14th, 2020
ramesh-jarakiholi

ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ನಾಯಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಸಿಗಬೇಕು ಎಂಬುದೇ ನನ್ನ ಆಗ್ರಹ ಎಂದು ಹೇಳುವ ಮೂಲಕ ಸಚಿವ ರಮೇಶ್ ಜಾರಕಿಹೊಳಿ ಅಚ್ಚರಿ ಮೂಡಿಸಿದ್ದಾರೆ. ಕಳೆದ 6 ತಿಂಗಳಿನಿಂದ ಸಿಎಂ ಬಿಎಸ್ವೈ ಕ್ಯಾಬಿನೆಟ್ನಲ್ಲಿ ಸಚಿವ ಸ್ಥಾನ ಪಡೆಯಲು ರಮೇಶ್ ಜಾರಕಿಹೊಳಿ ಸಾಕಷ್ಟು ಪ್ರಯತ್ನ ನಡೆಸಿದ್ದಾರೆ. ಆದರೆ, ಈ ಎಲ್ಲಾ ಪ್ರಯತ್ನಗಳೂ ವಿಫಲವಾಗಿವೆ. ಇದೀಗ ಕೊನೆಯ ಪ್ರಯತ್ನ ಎನ್ನುವಂತೆ ಉಮೇಶ್ ಕತ್ತಿ ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರ ಬಳಿ ಸಚಿವ ಸ್ಥಾನಕ್ಕಾಗಿ ಲಾಬಿ […]

ಸಚಿವ ಆನಂದ್ ಸಿಂಗ್‍ಗೆ ಅರಣ್ಯ ಇಲಾಖೆ ಖಾತೆ ನೀಡಿದ್ದು ಕಳ್ಳನ ಕೈಗೆ ಕೀಲಿ ಕೈ ಕೊಟ್ಟಂತೆ : ಮಾಜಿ ಸಚಿವ ಹೆಚ್.ಎಂ ರೇವಣ್ಣ

Friday, February 14th, 2020
revanna

ರಾಯಚೂರು : ಸಚಿವ ಆನಂದ್ ಸಿಂಗ್‍ಗೆ ಅರಣ್ಯ ಇಲಾಖೆ ಖಾತೆ ನೀಡಿದ್ದು ಕಳ್ಳನ ಕೈಗೆ ಕೀಲಿ ಕೈ ಕೊಟ್ಟಂತೆ ಆಗಿದೆ ಅಂತ ಮಾಜಿ ಸಚಿವ ಹೆಚ್.ಎಂ ರೇವಣ್ಣ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಗಣಿ ವ್ಯವಾಹಾರದಲ್ಲಿ ಸ್ವಲ್ಪ ಅರಣ್ಯ ಅಸ್ತವ್ಯಸ್ತವಾಗುವುದು ಸರಿ ಅಂತ ಹೇಳೋ ಸಚಿವನಿಂದ ಏನನ್ನು ನಿರೀಕ್ಷೆ ಮಾಡಬಹುದು ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ವಿಳಂಬ ಮಾಡಿದ್ದು ನೋಡಿದರೆ ಇಂಥ ಪರಿಸ್ಥಿತಿ ಯಾರಿಗೂ ಬರೋದು ಬೇಡ. ವಿಶ್ವನಾಥ್ ಸ್ಥಿತಿಯಂತೂ ಕೇಳೋದೇ […]