ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಅಂತಾರಾಷ್ಟ್ರೀಯ ಐ.ಎಸ್.ಒ. 270011ಪ್ರಶಸ್ತಿ ಪ್ರದಾನ

Friday, March 15th, 2024
iso

ಉಜಿರೆ: ಲಂಡನ್‌ನಲ್ಲಿ ಪ್ರಧಾನಕಛೇರಿ ಹೊಂದಿರುವ ಎನ್.ಕ್ಯೂ.ಎ. ಸಂಸ್ಥೆ 2023 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ, ಪಾರದರ್ಶಕತೆ, ತಂತ್ರಜ್ಞಾನಗಳ ಬಳಕೆ, ಸುರಕ್ಷತೆ, ಬದ್ಧತೆ, ಕಾರ್ಯಕರ್ತರ ಕಾರ್ಯಕುಶಲತೆ, ವರದಿಗಳ ತಯಾರಿ ಮತ್ತು ಬಳಕೆ, ವ್ಯವಹಾರದಲ್ಲಿ ನೈಪುಣ್ಯತೆ ಮೊದಲಾದ 114 ವಿಷಯಗಳನ್ನು ಗಮನಿಸಿ ಅಂತಾರಾಷ್ಟ್ರೀಯ ಐ.ಎಸ್.ಒ. 270011 ಪ್ರಶಸ್ತಿ ಪ್ರದಾನ ಮಾಡಲು ಸಂತೋಷ ಮತ್ತು ಅಭಿಮಾನ ಉಂಟಾಗುತ್ತದೆ ಎಂದು ಎನ್.ಕ್ಯೂ.ಎ. ಸಂಸ್ಥೆಯ ಮಹಾಪ್ರಬಂಧಕ ಅಮರ್‌ದೀಪ್ ಹೇಳಿದರು.ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪ್ರತಿಷ್ಠಿತ […]

ಜಿಲ್ಲಾ ಕಾಂಗ್ರೇಸ್ ಮುಖಂಡ ಬೆಂಗ್ರೆ ಶೇಖರ್ ಸುವರ್ಣ ನಿಧನ

Friday, March 15th, 2024
shekara-Bangera

ಮಂಗಳೂರು : ಜಿಲ್ಲಾ ಕಾಂಗ್ರೇಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆಯವರು ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಶ್ರೀಯುತರು ಪತ್ನಿ ಮತ್ತು ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಾಂಗ್ರೇಸ್ ಪಕ್ಷದ ಮಂಗಳೂರು ದಕ್ಷಿಣದ ವಿಭಾಗದ ಉಪಾಧ್ಯಕ್ಷರಾಗಿ ರಾಜಕೀಯ ಸೇವೆಯನ್ನು ಮಾಡಿದ ಶ್ರೀಯುತರು ಬೆಂಗ್ರೆ ಮಹಾಜನ ಸಭಾ ಅಧ್ಯಕ್ಷರಾಗಿ ಅನೇಕ ಅಭಿವೃದ್ದಿ ಕಾರ್ಯಗಳನ್ನು ಮಾಡಿ ಜನಮನ್ನಣೆ ಪಡೆದಿದ್ದರು. ಬೆಂಗ್ರೆ ಶೇಷಾಶಯನ ಮಂದಿರ ಅಲ್ಲದೆ ಇತರ ಧಾರ್ಮಿಕ […]

“ಆಳ್ವಾಸ್ ನಿಂದ 10 ಕೋಟಿಗೂ ಮಿಕ್ಕಿದ ವಿದ್ಯಾರ್ಥಿವೇತನ” -ಡಾ.ಎಂ. ಮೋಹನ್ ಆಳ್ವ

Friday, March 15th, 2024
mohan-Alva

ಮಂಗಳೂರು: “ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳನ್ನು ನೀಡುತ್ತಾ ಬಂದಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ” ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “10ನೇ ತರಗತಿಯಲ್ಲಿ ಸಿಬಿಎಸ್‌ಸಿ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ) ಐಸಿಎಸ್‌ಇ […]

ಕೆಎಸ್ ಈಶ್ವರಪ್ಪ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ

Friday, March 15th, 2024
eswarappa

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲೂ ತಮ್ಮ ಪುತ್ರನಿಗೆ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪುತ್ರನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಈಶ್ವರಪ್ಪ ಇದೀಗ ಅಖಾಡಕ್ಕಿಳಿದಿದ್ದಾರೆ. ಇಂದು ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳೊಂದಿಗೆ ನಗರದ ಬಂಜಾರ […]

ಹತ್ತನೇ ತರಗತಿಯ ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿಸಿರಿ ಬ್ಯಾಡ್‌ ಟಚ್‌ ಮಾಡುವ ಅಧ್ಯಾಪಕ

Friday, March 15th, 2024
Guruva-Mogera

ಮೂಡುಬಿದ್ರೆ : ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೆ.28ರಂದು ಹತ್ತನೇ ತರಗತಿಯ ಕೆಲವು ವಿದ್ಯಾರ್ಥಿನಿಯರು ಬಂದು ಸಹ […]

ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ  ಮರಳಿ  ಬಿಜೆಪಿಗೆ ಅಧಿಕೃತ ಸೇರ್ಪಡೆ

Thursday, March 14th, 2024
ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ  ಮರಳಿ  ಬಿಜೆಪಿಗೆ ಅಧಿಕೃತ ಸೇರ್ಪಡೆ

ಬೆಂಗಳೂರು : ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಈ ಬಾರಿಯ ಲೋಕಸಭಾ ಅಭ್ಯರ್ಥಿ ಸ್ಥಾನ ಬದಲಾವಣೆಯಾದ ಹಿನ್ನಲೆಯಲ್ಲಿ ಕೊಟ್ಟ ಮಾತಿನಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂಧರ್ಭ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಮಂಡಲಾಧ್ಯಕ್ಷ ರಾಧಾಕೃಷ್ಣ ಆಳ್ವ, ಪಿಜಿ ಜನನ್ನಿವಾಸ ರಾವ್, ಪುತ್ತಿಲ ಪರಿವಾರದ ಮುಖ್ಯಸ್ಥ ಪ್ರಸನ್ನ ಮರ್ತಾ ಮೊದಲಾದವರು […]

ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೆಲ್​ನಲ್ಲಿ ಕೋಲಾರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ, ಒಕ್ಕೂಟದಿಂದ ಪ್ರತಿಭಟನೆ

Thursday, March 14th, 2024
Alvas-student

ಮೂಡಬಿದ್ರೆ : ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೆಲ್​ನಲ್ಲಿ ಕೋಲಾರ ಮೂಲದ ಸಂಜಯ್ ಭುವನ್ (16) ಎಂಬ ವಿದ್ಯಾರ್ಥಿ ಮಾ.12 ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಕಾಲೇಜಿಗೆ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ (NSUI) ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಮುತ್ತಿಗೆ‌ ಹಾಕಲಾಗಿದೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರಿಂದ ಕಾಲೇಜು ಬಳಿ ಭದ್ರತೆ ಒದಗಿಸಲಾಗಿದೆ. ಸಂಜಯ್ ಭುವನ್ ಚಿಲ್ಲರೆ ಹಣ ತೆಗೆದು ಆಡಳಿತ ಮಂಡಳಿಗೆ ತಿಳಿದು ಅವಮಾನಗೊಂಡು ಈ ನಿರ್ಧಾರಕೈ ಗೊಂಡಿದ್ದಾಗಿ […]

ಉಡುಪಿ ಕೊಲೆ ಆರೋಪಿ ಪ್ರವೀಣ್‌ ಚೌಗುಲೆ ಗೆ ಕಿಡ್ನಿ ಸ್ಟೋನ್‌, ವಿಚಾರಣೆ ಮಾ. 27ಕ್ಕೆ ಮುಂದೂಡಿದೆ.

Thursday, March 14th, 2024
Praveen-Arun-Chougule

ಉಡುಪಿ : ಉಡುಪಿ ನೇಜಾರಿನ ಕೊಲೆ ಆರೋಪಿ ಪ್ರವೀಣ್‌ ಚೌಗುಲೆ ಮಂಗಳವಾರ ನಡೆಯಬೇಕಿದ್ದ ಚಾರ್ಜ್‌ (ಆಪಾದನೆ ವಾಚಿಸುವ) ಪ್ರಕ್ರಿಯೆಯನ್ನು ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಮಾ. 27ಕ್ಕೆ ಮುಂದೂಡಿದೆ. ಮಾ. 7ರಂದು ನ್ಯಾಯಾಧೀಶ ದಿನೇಶ್‌ ಹೆಗ್ಡೆ, ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಆಪಾದನೆ ವಾಚಿಸಲು ಬೇಕಾದ ಸಾಕ್ಷ್ಯಾಧಾರಗಳಿವೆ ಎಂದು ತೀರ್ಮಾನಿಸಿ ಮಾ. 13ರಂದು ಚಾರ್ಜ್‌ ದಿನ ನಿಗದಿಪಡಿಸಿ ಆದೇಶ ನೀಡಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ಮಲ್ಪೆ ಪೊಲೀಸರಿಗೆ ನಿರ್ದೇಶಿಸಿದ್ದರು. ಆದರೆ […]

ಗ್ಯಾರೇಜ್ ನಲ್ಲಿ ನಿಂತಿದ್ದ ಮಾಲಕ ಮೇಲೆ ಬಸ್ ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ಸಾವು

Thursday, March 14th, 2024
dayananda-shetty

ಉಡುಪಿ : ಬಸ್ ಮಾಲಕನೋರ್ವ ತನ್ನ ಸ್ವಂತ ಬಸ್ ಡಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಯಾನಂದ ಶೆಟ್ಟಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ದಯಾನಂದ ಶೆಟ್ಟಿ ಅವರ ಬಸ್ ಅನ್ನು ರಿಪೇರಿಗಾಗಿ ಅತ್ರಾಡಿಯ ಗ್ಯಾರೇಜ್​ಗೆ ಕೊಂಡೊಯ್ಯಲಾಗಿತ್ತು. ಹೀಗಾಗಿ ತಮ್ಮ ಬಸ್​ನ ದುರಸ್ತಿ ಕಾರ್ಯ ನೋಡಿಕೊಳ್ಳಲು ಸ್ವತಃ ದಯಾನಂದ ಅವರೇ ಗ್ಯಾರೇಜ್​ಗೆ ಹೋಗಿದ್ದರು. ಅದರಂತೆ ಬಸ್ ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ, ಗ್ಯಾರೇಜ್​ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದ […]

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಬಿ.ಎಸ್ ಯಡಿಯೂರಪ್ಪ ಭೇಟಿ ಆದ ಶೋಭಾ

Thursday, March 14th, 2024
shobha-karandlaje

ಬೆಂಗಳೂರು: ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರದಿಂದ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕೇಂದ್ರಸ ಚಿವೆ ಶೋಭಾ ಕರಂದ್ಲಾಜೆಯವರು ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ರಾಷ್ಟ್ರೀಯ ನಾಯಕರ ಮೇಲೆ ವಿಶ್ವಾಸ ನನಗೆ ಇತ್ತು. ಪಕ್ಷ ಕೊಟ್ಟ ಎಲ್ಲ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಉಡುಪಿ- ಚಿಕ್ಕಮಗಳೂರು ಜಿಲ್ಲೆಯಲ್ಲೂ ಅಭಿವೃದ್ಧಿ ಆಗಿತ್ತು. ಆದರೆ ಕೆಲವರು ಸಹಿಸಲಿಲ್ಲ. ಪ್ರಾಯೋಜಿತ ಪ್ರತಿಭಟನೆಗಳು ನಡೆದವು. ತಮಗೆ ಟಿಕೆಟ್ ಬೇಕು ಎಂದು ಕೆಲವರು ಮಾಡಿಸಿದರು, ಅವರು ಯಶಸ್ವಿ ಆಗಲಿಲ್ಲ. ಅವರು […]