ಧನಂಜಯ್ ಕುಮಾರ್ ಜೆಡಿಎಸ್‍ಗೆ

12:24 PM, Thursday, March 13th, 2014
Share
1 Star2 Stars3 Stars4 Stars5 Stars
(5 rating, 6 votes)
Loading...

Dhananjay-Kumarಬೆಂಗಳೂರು: ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ದೊರೆಯದೆ ಅತೃಪ್ತಗೊಂ ಡಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪರಮಾಪ್ತ ಧನಂಜಯ್ ಕುಮಾರ್ ಜೆಡಿಎಸ್ ಸೇರಿದ್ದಾರೆ. ಮಂಗಳೂರು ಕ್ಷೇತ್ರದಿಂದ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಬುಧವಾರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಧನಂಜಯ್ ಕುಮಾರ್ ಪಕ್ಷ ಸೇರ್ಪಡೆ ಮತ್ತು ಚುನಾವಣೆಗೆ ಸ್ಪರ್ಧಿಸುವ ಕುರಿತು ಚರ್ಚೆ ನಡೆಸಿದರು.

ದೇವೇಗೌಡರು ಕುಮಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದು, ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಅನುಮತಿ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English