ದಕ್ಷಿಣ ಕನ್ನಡ – ಉಡುಪಿ ಲೋಕಸಭೆ ಬಿಜೆಪಿಗೆ ಭರ್ಜರಿ ಗೆಲುವು

11:46 PM, Friday, May 16th, 2014
Share
1 Star2 Stars3 Stars4 Stars5 Stars
(5 rating, 6 votes)
Loading...
Nalin Kumar

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳೀನ್‌ ಕುಮಾರ್‌ ಕಟೀಲ್‌ ಅವರು 1,43,000 ಲಕ್ಷ ಮತಗಳ ಅಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜನಾರ್ದನ ಪೂಚಾರಿ ಅವರನ್ನು ಸೋಲಿಸಿದ್ದಾರೆ. ನಳೀನ್‌ ಕುಮಾರ್‌ ಕಟೀಲ್‌ ಅವರು 6,42,739 ಮತಗಳನ್ನು ಪಡೆದರೆ. ಜನಾರ್ದನ ಪೂಚಾರಿ ಅವರು 4,99,030 ಮತಗಳನ್ನು ಪಡೆದರು.

ದಕ್ಷಿಣಕನ್ನಡ, ಉಡುಪಿ-ಚಿಕ್ಕಮಗಳೂರಿನಲ್ಲಿ ನರೇಂದ್ರ ಮೋದಿ ಅಲೆಗೆ ಭರ್ಜರಿ ಮತಗಳು ಬಿಜೆಪಿ ತೆಕ್ಕೆಗೆ ಬಿದ್ದಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲು ಅವರು ಸತತ ಎರಡನೇ ಬಾರಿಗೆ ಲೋಕಸಭೆಯನ್ನು ಪ್ರವೇಶಿಸಿದರೆ ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಸತತ 6ನೇ ಸೋಲಾಗಿದೆ.

2009 ರ ಲೋಕಸಭಾ ಚುನಾವಣೆಯಲ್ಲಿ 40,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದ ಬಿಜೆಪಿಯ ನಳಿನ್ ಕುಮಾರ್ ಈ ಬಾರಿ 1,43,000 ಮತಗಳ ಅಂತರದಿಂದ ಗೆಲುವು ದಾಖಲಿಸಿಕೊಂಡಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಾಂದ್ಲಾಜೆ ಅವರು ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಅವರ ವಿರುದ್ಧ 1,81,643ಲಕ್ಷ ಮತಗಳ ಭಾರೀ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಶೋಭಾ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಗೊಂಡಿದ್ದಾರೆ. ಜಯಪ್ರಕಾಶ್ ಹೆಗ್ಡೆ3,99,525 ಪಡೆದುಕೊಂಡರು. ವಿ.ಧನಂಜಯಕುಮಾರ್ 14895 ಪಡೆದುಕೊಂಡಿದ್ದಾರೆ.


sobha

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English