ರಾಜಕೀಯ ಲಾಭಕೋಸ್ಕರ ಜಿಲ್ಲೆಯ ಗಲಭೆಗಳಿಗೆ ರೈ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ : ಪುರಾಣಿಕ್

11:47 PM, Tuesday, June 20th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

vhp ಮಂಗಳೂರು : ಆರ್‌ಎಸ್‌ಎಸ್ ಮುಖಂಡ ಡಾ. ಪ್ರಭಾಕರ ಭಟ್‌ರನ್ನು ಏಕವಚನದಲ್ಲಿ ಸಂಭೋದಿಸಿ 307 ಕೇಸು ದಾಖಲಿಸಿ ಎಂದು ಸಚಿವರು ಸೂಚಿಸುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ನಡೆಯುವ ಗಲಭೆ, ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ನಾಯಕರು ಕುಮ್ಮಕ್ಕು ನೀಡುತ್ತಿದ್ದಾರೆ. ಆದರೆ ಅದನ್ನು ಮರೆಮಾಚಿ ಹಿಂದೂಗಳೇ ಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ಅಪಪ್ರಚಾರ ಮಾಡಿ ಕೋಮು ಭಾವನೆ ಹಚ್ಚಲಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ನಡೆದ ಎಲ್ಲಾ ಗಲಭೆ ಪ್ರಕರಣಗಳನ್ನು ಸರಕಾರ ಸಿಬಿಐಗೆ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ.ಪುರಾಣಿಕ್ ಒತ್ತಾಯಿಸಿದ್ದಾರೆ.

ಕದ್ರಿಯಲ್ಲಿರುವ ವಿಹಿಂಪ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ  ಮಾತನಾಡಿದ ಪುರಾಣಿಕ್ ಜಿಲ್ಲೆಯಲ್ಲಿ ಅಶಾಂತಿಗೆ ಕಾಂಗ್ರೆಸ್ ನಾಯಕರೇ ಕಾರಣರಾಗುತ್ತಿದ್ದಾರೆ ಎಂಬುದು ಸಚಿವ ರಮಾನಾಥ ರೈ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹೇಳಿದ ಮಾತುಗಳ ವೀಡಿಯೋ ಸಾಕ್ಷಿಯಾಗಿದೆ.  ತಮ್ಮ ರಾಜಕೀಯ ಲಾಭಕೋಸ್ಕರ ಸಚಿವರು ಒಂದು ವರ್ಗವನ್ನು ಓಲೈಸುವ ಉದ್ದೇಶದಿಂದ ಜಿಲ್ಲೆಯ ಗಲಭೆಗಳಿಗೆ ಪರೋಕ್ಷ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಲೀಸ್ ಅಧಿಕಾರಿಗಳು ಸಚಿವರ ತಾಳಕ್ಕೆ ಕುಣಿಯದಿದ್ದರೆ ವರ್ಗಾಯಿಸಲಾಗುತ್ತದೆ. ನಗರ ಪೊಲೀಸ್ ಕಮೀಷನರ್ ಅವರನ್ನೂ ಇದೇ ಕಾರಣಕ್ಕೆ ವರ್ಗಾವಣೆ ಮಾಡಲಾಗಿದೆ. ರಮಾನಾಥ ರೈ ಪೊಲೀಸರನ್ನು ನಿಷ್ಪಕ್ಷಪಾತ ತನಿಖೆ ಮಾಡಲು ಬಿಡುತ್ತಿಲ್ಲ. ಹೀಗಾಗಿ ಎಲ್ಲ ಗಲಭೆ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸುತ್ತಿದ್ದೇವೆ ಎಂದರು.

ವಿಹಿಂಪ ಪ್ರಾಂತ ಕಾರ್ಯದರ್ಶಿ ಕೃಷ್ಣಮೂರ್ತಿ, ಜಿಲ್ಲಾ ಕಾರ್ಯದರ್ಶಿ ಗೋಪಾಲ್ ಕುತ್ತಾರ್, ಬಜರಂಗದಳ ಪ್ರಾಂತ ಸಂಯೋಜಕ ಶರಣ್ ಪಂಪುವೆಲ್, ಜಿಲ್ಲಾ ಸಂಚಾಲಕ ಭುಜಂಗ ಕುಲಾಲ್, ಪ್ರವೀಣ್ ಕುತ್ತಾರ್, ಪುನೀತ್‌ಕುಮಾರ್ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English