ರಾಜ್ಯ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಸಾಲ ಮನ್ನಾ ಮಾಡಬೇಕಾಗಿತ್ತು : ಯಡಿಯೂರಪ್ಪ

12:14 PM, Friday, June 23rd, 2017
Share
1 Star2 Stars3 Stars4 Stars5 Stars
(No Ratings Yet)
Loading...

Yedurappaಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕೇಂದ್ರದಿಂದ ರಾಜ್ಯಕ್ಕೆ ಒಂದು ಲಕ್ಷದ 13ಸಾವಿರ ಕೋಟಿ ಅನುದಾನ ಬಂದಿದೆ. ರಾಜ್ಯ ಸರ್ಕಾರ ಮತ್ತೆ ಒಂದು ಲಕ್ಷ ಕೋಟಿ ಸಾಲ ಮಾಡಿದೆ. ಇಷ್ಟಿದ್ದರೂ ಕೂಡ ರೈತರ 50 ಸಾವಿರ ಮಾತ್ರ ಸಾಲ ಮನ್ನಾ ಮಾಡಲಾಗಿದೆ. ರಾಜ್ಯ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಸಾಲ ಮನ್ನಾ ಮಾಡಬೇಕಾಗಿತ್ತು. ಆದರೂ ಬಿಜೆಪಿ ಮಾಡಿದ ಹೋರಾಟಕ್ಕೆ ಮಣಿದು ಸಾಲ ಮನ್ನಾ ಮಾಡಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರಾವಳಿ ಭಾಗದಲ್ಲೂ ಕೂಡ ಆಗಾಗ ಗಲಭೆಗಳು ನಡೆಯುತ್ತಿದ್ದು, ಇದು ರಾಜ್ಯ ಸರ್ಕಾರದ ವೈಫಲ್ಯವಾಗಿದೆ. ಈಗಾಗಲೇ ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಈ ಪ್ರವಾಸ ಮುಗಿದ ತಕ್ಷಣ ಎಲ್ಲಾ ನಾಯಕರ ಜೊತೆ ಸೇರಿ ಮತ್ತೊಮ್ಮೆ ರಾಜ್ಯ ಪ್ರವಾಸ ಮಾಡಲಿದ್ದೇನೆ ಎಂದು ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English