ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ, ಬಸ್‌‌‌ ಕಂಡಕ್ಟರ್‌ ಪೊಲೀಸ್ ವಶ

12:35 PM, Wednesday, October 18th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

ganjaಮಂಗಳೂರು:  ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡಸಿ ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ್ದಾರೆ.

ಮೊಹಮ್ಮದ್ ಇಝುದ್ದಿನ್ (32) ಬಂಧಿತ ಆರೋಪಿ. ಕಂಕನಾಡಿ ನಗರ ವ್ಯಾಪ್ತಿಯ ಪಂಪ್ವೆಲ್ ವೃತ್ತ ಬಳಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ವೃತ್ತಿಯಲ್ಲಿ ಬಸ್ ನಿರ್ವಾಹಕನಾಗಿರುವ ಬಂಟ್ವಾಳ ಅಮ್ಮುಂಜೆಯ ಮೊಹಮ್ಮದ್ ಇಝುದ್ದಿನ್‌ನನ್ನು ವಶಕ್ಕೆ ಪಡೆದುಕೊಂಡು ಆತನಿಂದ 200 ಗ್ರಾಂ ಗಾಂಜಾ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಗಾಂಜಾವನ್ನು ಆರೋಪಿಯು ಕೇರಳ ರಾಜ್ಯದ ಕುಂಜತ್ತೂರು ಬಳಿಯಿಂದ ಖರೀದಿ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ತಂದಿದ್ದಾಗಿ ತಿಳಿಸಿದ್ದಾನೆ. ಆರೋಪಿ ಮೊಹಮ್ಮದ್ ಇಝದ್ದೀನ್ ವಿರುದ್ಧ ಈ ಹಿಂದೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣವೊಂದು ದಾಖಲಾಗಿತ್ತು. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಹನುಮಂತರಾಯ ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English