ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ದೀಪಾವಳಿ ಸಂಭ್ರಮಾಚರಣೆ

2:13 PM, Saturday, October 21st, 2017
Share
1 Star2 Stars3 Stars4 Stars5 Stars
(5 rating, 1 votes)
Loading...

Diwali celebration ಮಂಗಳೂರು: ಜೆಪ್ಪುನಲ್ಲಿರುವ ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ದೀಪಾವಳಿ ಸಂಭ್ರಮಾಚರಣೆ ಕಾರ್ಯಕ್ರಮ ಜರಗಿತು. ಭಗಿನಿ ಸಮಾಜದ ಮಕ್ಕಳೊಂದಿಗೆ ಶಾಸಕ ಜೆ.ಆರ್.ಲೋಬೊ ಅವರು ದೀಪಾವಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಅವರು ಈ ಹಬ್ಬವು ಎಲ್ಲರಿಗೆ ಸುಖ, ಸಮೃದ್ಧಿಯನ್ನು ನೀಡಲಿ ಎಂದು ಹಾರೈಸಿದರು. ದೀಪಾವಳಿ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಚೈತನ್ಯದ ಬೆಳಕು ನೀಡಲಿ ಎಂದು ಹಾರೈಸಿದ ಅವರು ಹೊಸ ಉತ್ಸಾಹವನ್ನು ತರಲಿ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಲೀಂ, ಮಂಗಳೂರು ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಡೆನ್ನೀಸ್ ಡಿಸಿಲ್ವಾ, ಕಾರ್ಪೊರೇಟರ್ ಗಳು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English