ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

4:23 PM, Tuesday, October 31st, 2017
Share
1 Star2 Stars3 Stars4 Stars5 Stars
(5 rating, 1 votes)
Loading...

alvasಮೂಡುಬಿದಿರೆ: ತಲಪಾಡಿಯಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.

20 ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ 18  ಚಿನ್ನ, 16 ಬೆಳ್ಳಿ ಮತ್ತು 1 ಕಂಚಿನ ಪದಕಗಳನ್ನು ಪಡೆದು ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ 19 ಚಿನ್ನ, 16ಬೆಳ್ಳಿ ಮತ್ತು 1 ಕಂಚಿನ ಪದಕಗಳನ್ನು ಪಡೆದು ಆಳ್ವಾಸ್ ಪ.ಪೂ. ಕಾಲೇಜು ಪ್ರಶಸ್ತಿಯನ್ನು ಪಡೆಯಿತು. ಬಾಲಕರ ವಿಭಾಗದಲ್ಲಿ ವೈಯಕ್ತಿಕ ಪ್ರಶಸ್ತಿಯನ್ನು ನವನೀತ್, ಬಾಲಕಿಯರ ವಿಭಾಗದಲ್ಲಿ ಜೋತ್ಸ್ನಾ ಮತ್ತು ಪ್ರಿಯಾ ಎಲ್.ಡಿ. ಪಡೆದರು. ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ನವೆಂಬರ್ 7, 8 ರಂದು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಹಾಗೂ ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜು, ತಲಪಾಡಿ ಇದರ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English