8ನೇ ಸಾಲಿನ ವಾರ್ಷಿಕ ಕಲ್ಲಚ್ಚು ಪ್ರಶಸ್ತಿ 2017

3:25 PM, Saturday, December 16th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

kallachuಮಂಗಳೂರು: ಕಲ್ಲಚ್ಚು ಪ್ರಕಾಶನವು ಕೊಡಮಾಡುವ 8ನೇ ಸಾಲಿನ ವಾರ್ಷಿಕ ಕಲ್ಲಚ್ಚು ಪ್ರಶಸ್ತಿ 2017 ಪ್ರದಾನ ಸಮಾರಂಭವು ಇಂದು ನಗರದ ದಿ ಕ್ಯಾಂಪಸ್ ಕೆರಿಯರ್ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್. ಪ್ರಶಸ್ತಿ ಸ್ವೀಕರಿಸಿದರು. ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯ ಬಿ. ಎ. ಮುಹಮ್ಮದ್ ಅಲಿ ಅಭಿನಂದನಾ ಮಾತುಗಳನ್ನಾಡಿದರು.

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಭದ್ರಾವತಿಯ ಸಂಜೀವಿನಿ ಹಿರಿಯ ನಾಗರಿಕರ ಆರೈಕಾ ಕೇಂದ್ರದ ಸ್ಥಾಪಕಿ ಸವಿತಾ ಸಂಪತ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಕೆ. ಮುಹಮ್ಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ದ.ಕ. ಜಿಲ್ಲಾಧ್ಯಕ್ಷ ಸುರೇಶ್ ಭಟ್ ಬಾಕ್ರಬೈಲ್, ಸಿಐಎಲ್‌ನ ಆಡಳಿತ ನಿರ್ದೇಶಕಿ ಸಚಿತಾ ನಂದಗೋಪಾಲ್, ಅನುಪಮ ಮಾಸಿಕದ ಸಂಪಾದಕಿ ಶಹನಾಝ್ ಎಂ., ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ, ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕಾಸರಗೋಡು, ಸನ್ಮಾರ್ಗ ವಾರ ಪತ್ರಿಕೆಯ ಸಂಪಾದಕ ಎ.ಕೆ. ಕುಕ್ಕಿಲ, ಹಿರಿಯ ಕವಿ ತಾರನಾಥ್ ಬೋಳಾರ್, ಹಿದಾಯ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಖಾಸಿಂ ಅಹ್ಮದ್ ಹೆಚ್.ಕೆ., ಕಿಡ್ನಿ ರೋಗಿಗಳ ಸಂಘದ ಅಧ್ಯಕ್ಷ ವಿ. ಎಂ. ರಿಯಾಝ್, ಜಿಲ್ಲಾ ಕ.ರ.ವೇ. ವಕ್ತಾರ ಮೊಹ್ಶಿರ್ ಅಹ್ಮದ್ ಸಾಮಣಿಗೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಕಲ್ಲಚ್ಚು ಪ್ರಕಾಶನದ ಮುಖ್ಯಸ್ಥ ಮಹೇಶ್ ಆರ್. ನಾಯಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English