ನವಶಕ್ತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಆಕ್ರೋಶ

1:06 PM, Tuesday, February 20th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

congressಮಂಗಳೂರು: ಕುಲ್ಕುಂದದಲ್ಲಿ ಆಯೋಜಿಸಿರುವ ನವಶಕ್ತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರದಲ್ಲಿ ಭ್ರಷ್ಟಾಚಾರಿಗಳಿದ್ದಾರೆ ಎಂದು ಸಿಎಂ ಅವರ 40 ಲಕ್ಷ ರೂ. ಬೆಲೆಯ ವಾಚ್‌ ವಿಷಯವನ್ನು ಶಾ ಪ್ರಸ್ತಾಪಿಸಿದರು. ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಬಗ್ಗೆ ಮಾತನಾಡಿದ ಅವರು, ಸರ್ಕಾರ ತುಷ್ಟೀಕರಣ ಮಾಡುತ್ತಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಸರ್ಕಾರ ಬದಲಿಸಬೇಕೆನ್ನುವುದು ಜನರ ಆಶಯವಾಗಿದೆ. ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಹಾಗೂ ರಾಜ್ಯ ಬಿಜೆಪಿ ಗೆಲುವು ದಕ್ಷಿಣ ಭಾರತಕ್ಕೆ‌ ಹೆಬ್ಬಾಗಿಲು ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ 80 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದೆ. ಆದರೆ, ಕೇಂದ್ರ ‌ಸರ್ಕಾರ ಏನು ಮಾಡಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಏನು ಮಾಡಿದೆ ಎಂದು ನಾವು ಪ್ರಶ್ನಿಸಬೇಕಾಗಿದೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English