ಎ.12ರಂದು ಕಾಂಗ್ರೆಸ್ ನ ಅಭ್ಯರ್ಥಿಗಳ ಪಟ್ಟಿ ಪ್ರಕಟ

12:00 PM, Monday, April 9th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

rahul-gandhiಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ನ ಸ್ಕ್ರೀನಿಂಗ್ ಸಮಿತಿ ಸಭೆ ಸೋಮವಾರ ಹೊಸದಿಲ್ಲಿಯಲ್ಲಿ ನಡೆಯಲಿದೆ.

ಸ್ಕ್ರೀನಿಂಗ್ ಸಮಿತಿ ಅಧ್ಯಕ್ಷ ಮಧುಸೂಧನ ಮಿಸ್ತ್ರೀ ಅಧ್ಯಕ್ಷೆಯಲ್ಲಿ ನಡೆಯಲಿರುವ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಅರ್ಜಿಯ ಪರಿಶೀಲನೆ ನಡೆಯಲಿದೆ.

ಎರಡು ದಿನಗಳ ಸಭೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ , ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂ ರಾವ್, ಎಸ್ ಆರ್ ಪಾಟೀಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ

ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಎರಡು ದಿನಗಳ ಸಭೆಯಲ್ಲಿ ನಡೆಯಲಿದ್ದು, ಮಂಗಳವಾರ ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳುವ ಸಾಧ್ಯತೆಯಿದೆ. ಎ.12 ರಂದು ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English