ಸ್ಯಾಂಡಲ್ ವುಡ್ ನಟಿ ಪೂಜಾಗಾಂಧಿ ಜೆಡಿಎಸ್ ಸೇರ್ಪಡೆ

5:24 PM, Saturday, April 21st, 2018
Share
1 Star2 Stars3 Stars4 Stars5 Stars
(5 rating, 1 votes)
Loading...

pooja-gandhiಬೆಂಗಳೂರು : ಸ್ಯಾಂಡಲ್ ವುಡ್ ನಟಿ ಪೂಜಾಗಾಂಧಿ ಅವರು ಇಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಪೂಜಾಗಾಂಧಿ ಪಿಜಿಆರ್ ಸಿಂಧ್ಯಾ ನೇತೃತ್ವದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ನಟಿ ಪೂಜಾಗಾಂಧಿ ಕಳೆದ ಚುನಾವಣೆಯಲ್ಲಿ ರಾಯಚೂರಿನಿಂದ ಬಿಎಸ್ ಆರ್ ಪಕ್ಷದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಇದೀಗ ಮತ್ತೆ ರಾಜಕೀಯಕ್ಕೆ ರೀ ಎಂಟ್ರಿ ಕೊಟ್ಟಿರುವ ಪೂಜಾಗಾಂಧಿ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ.

2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English