ಶಿಕಾರಿಪುರದಲ್ಲಿ ಭರ್ಜರಿ ಜಯ ಸಾಧಿಸಿದ ಬಿ.ಎಸ್.ಯಡಿಯೂರಪ್ಪ

12:24 PM, Tuesday, May 15th, 2018
Share
1 Star2 Stars3 Stars4 Stars5 Stars
(No Ratings Yet)
Loading...

bs-yediyurappaಶಿವಮೊಗ್ಗ: ಕರ್ನಾಟಕ ಬಿಜೆಪಿ ಅಧ್ಯಕ್ಷ ಮತ್ತು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸ್ವ ಕ್ಷೇತ್ರ ಶಿಕಾರಿಪುರ ಕ್ಷೇತ್ರದಲ್ಲಿ ಅವರು ಗೆಲುವು ಸಾಧಿಸಿದ್ದಾರೆ.

ಶಿವಮೊಗ್ಗ ಸಂಸದರಾಗಿರುವ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದಿಂದ 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣೆ ದಿನಾಂಕ ಘೋಷಣೆಗೂ ಮೊದಲು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿತ್ತು.

ಬಿ.ಎಸ್.ಯಡಿಯೂರಪ್ಪ ಅವರು ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಆದರೆ, ಎಷ್ಟು ಮತಗಳ ಅಂತದಲ್ಲಿ ಎಂಬುದು ಇನ್ನೂ ಖಚಿತವಾಗಿಲ್ಲ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ

ಸದ್ಯದ ಮಾಹಿತಿ ಪ್ರಕಾರ ಪಡೆದ ಮತಗಳು

* ಬಿ.ಎಸ್.ಯಡಿಯೂರಪ್ಪ 61,971
* ಗೋಣಿ ಮಾಲತೇಶ್ 37,554
* ಎಚ್.ಟಿ.ಬಳಿಗಾರ್ 10120

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English