ನನ್ನನ್ನು ಯಾರೂ ಈ ನಿಟ್ಟಿನಲ್ಲಿ ಸಂಪರ್ಕ ಮಾಡಿಲ್ಲ… ಆ ಧೈರ್ಯ ಯಾರಿಗೂ ಇಲ್ಲ: ಎಚ್. ವಿಶ್ವನಾಥ್

2:57 PM, Friday, May 18th, 2018
Share
1 Star2 Stars3 Stars4 Stars5 Stars
(No Ratings Yet)
Loading...

H-vishwanath;ಹೈದರಾಬಾದ್: ರಾಜ್ಯ ಸರ್ಕಾರ ರಚನೆ ಕಸರತ್ತಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತಿಗೆ ರಾಜಕೀಯ ಪಕ್ಷಗಳಿಗೆ ಸುಪ್ರೀಂಕೋರ್ಟ್ ನಾಳೆ ದಿನಾಂಕ ನಿಗದಿಪಡಿಸಿದೆ. ಈ ನಡುವೆ ಬಿಜೆಪಿಯಿಂದ ಕುದುರೆ ವ್ಯಾಪಾರ ನಡೆಯಲು ಪ್ರಯತ್ನ ನಡೆಯುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಆದರೆ ನನ್ನನ್ನು ಯಾರೂ ಈ ನಿಟ್ಟಿನಲ್ಲಿ ಸಂಪರ್ಕ ಮಾಡಿಲ್ಲ. ಆ ಧೈರ್ಯ ಯಾರಿಗೂ ಇಲ್ಲ ಎಂದು ಹಿರಿಯ ಕಾಂಗ್ರೆಸ್ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ.

ತಮ್ಮ ತಂದೆಯವರನ್ನು ಖರೀದಿ ಮಾಡುವ ಪ್ರಯತ್ನ ಸಫಲವಾಗುವುದಿಲ್ಲ ಎಂದು ಶಾಸಕ ವಿಶ್ವನಾಥ್ ಅವರ ಪುತ್ರ ಹಾಕಿರುವ ಫೇಸ್ಬುಕ್ ಪೋಸ್ಟ್ ಬಗ್ಗೆ ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿದ ವಿಶ್ವನಾಥ್ ಈ ಬಗ್ಗೆ ನನಗೇನೂ ಗೊತ್ತಿಲ್ಲ. ಹುಡುಗರು ಏನು ಹಾಕ್ತಾರೋ ಗೊತ್ತಿಲ್ಲ. ನನ್ನನ್ನು ಯಾರೂ ಸಂಪರ್ಕಿಸಿಲ್ಲ. ನನ್ನ ನ್ನು ಸಂರ್ಕಿಸುವ ಧೈರ್ಯ ಯಾರಿಗೂ ಇಲ್ಲ ಎಂದು ಹೇಳಿದರು.

ತಮ್ಮ ಇಂದಿನ ಪರಿಸ್ಥಿತಿಯ ಬಗ್ಗೆ ಮಾತನಾಡಿದ ವಿಶ್ವನಾಥ್, ಪರಿಸ್ಥಿತಿಗೆ ಹೊಂದಿಕೊಂಡು ಹೋಗಬೇಕಾದ ಅನಿವಾರ್ಯತೆಯಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಗೆಲ್ಲುತ್ತೇವೆ ಎಂದು ನಮಗೆ ವಿಶ್ವಾಸವಿದೆ. ನನ್ನ ರಾಜಕೀಯ ಜೀವನದುದ್ದಕ್ಕೂ ಈ ತರಹದ ವಿಪರ್ಯಾಸಗಳನ್ನು ನೋಡಿಕೊಂಡು ಬರುತ್ತಿದ್ದೇನೆ. ಪರಿಸ್ಥಿತೊಗೆ ಅನುಗುಣವಾಗಿ ನಡೆದುಕೊಳ್ಳಲೇಬೇಕು ಎಮದು ವಿಷಾದ ವ್ಯಕ್ತಪಡಿಸಿದರು.

ಕೋಮುವಾದಿ ಪಕ್ಷವನ್ನು ದೂರವಿಡುವ ಉದ್ದೇಶದಿಂದ ನಿನ್ನೆಯದನ್ನು ಮರೆತು ನಾವು ಒಟ್ಟಾಗಿ ಸೇರಿದ್ದೇವೆ. ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಹೋರಾಟ ನಡೆದಿತ್ತು ಜೆಡಿಎಸ್ ನ್ನು ಬಿಜೆಪಿಯ ಬಿಟೀಂ ಎಂದು ಕೇಳಿಬರುತ್ತಿದ್ದ ಆರೋಪ ಸುಳ್ಳಾಯಿತು. ಈಗ ನಮಗೆ ಮುಖ್ಯಮಂತ್ರಿ ಸ್ಥಾನವನ್ನು ಪಡೆಯುವುದು ವಾರ್. ಅದು ಮುಂದುವರೆಯುತ್ತಿದೆ. ಇಬ್ಬರೂ ಸೇರಿ ಸುಭದ್ರ ಸರ್ಕಾರ ನೀಡುತ್ತೇವೆ ಎಂದು ವಿಶ್ವನಾಥ್ ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English