ವಿಧಾನಸಭಾಧ್ಯಕ್ಷರಾಗಿ ಕಾಂಗ್ರೆಸ್‍ನ ಕೆ.ಆರ್.ರಮೇಶ್‍ಕುಮಾರ್ ಆಯ್ಕೆ

9:32 PM, Friday, May 25th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

speakerಬೆಂಗಳೂರು : ರಾಜ್ಯ ವಿಧಾನಸಭಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್‍ನ ಕೆ.ಆರ್.ರಮೇಶ್‍ಕುಮಾರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಸುರೇಶ್‍ಕುಮಾರ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ರಮೇಶ್‍ಕುಮಾರ್ ಅವರು ನಾಮಪತ್ರ ಸಲ್ಲಿಸಿದ್ದು, ಆದರೆ ಈ ಚುನಾವಣೆಯಲ್ಲಿ ಬಿಜೆಪಿಯ ಸುರೇಶ್‍ಕುಮಾರ್ ಅವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಮಂಡಿಸದೇ ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ರಮೇಶ್‍ಕುಮಾರ್ ನೂತನ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅವಿರೋಧವಾಗಿ ಆಯ್ಕೆಯಾದ ರಮೇಶ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಎರಡನೇ ಬಾರಿಗೆ ಸದನದ ಸಭಾಧ್ಯಕ್ಷರಾಗಿ ರಮೇಶ್ ಕುಮಾರ್ ಆಯ್ಕೆ ಆಗಿರುವುದಕ್ಕೆ ಖುಷಿ ತಂದಿದೆ. ಸಭಾಧ್ಯಕ್ಷರ ಸ್ಥಾನ ಎಲ್ಲ ಸದಸ್ಯರಿಗೆ ತಮ್ಮ ಅನುಭವಗಳನ್ನು ಧಾರೆ ಎರೆಯುವ ಸ್ಥಾನ, ತಮ್ಮಂತಹ ಉತ್ತಮ ಹಿರಿಯ ವಾಗ್ಮಿಗಳು ಸದನದಲ್ಲಿ ಇರಬೇಕು ಎಂದು ಹೇಳಿದ್ದಾರೆ.
ಹಾಗೇ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಮುಂತಾದವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English