ಕೇಂದ್ರ ಸರ್ಕಾರಕ್ಕೆ 4ರ ಸಂಭ್ರಮ: ಮಂಗಳೂರಲ್ಲಿ ‌ಮಹಿಳಾ ಕಾಂಗ್ರೆಸ್ ಪ್ರತಿಭಟನೆ

3:35 PM, Saturday, May 26th, 2018
Share
1 Star2 Stars3 Stars4 Stars5 Stars
(No Ratings Yet)
Loading...

protestಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಾಲ್ಕು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯು.ಟಿ‌.ಖಾದರ್, ಮೋದಿ‌ ಅಧಿಕಾರಕ್ಕೆ ಬಂದಾಗ ತಾನು ದೇಶದ ಗೇಟ್ ಕೀಪರ್ ಆಗುತ್ತೇನೆ ಎಂದರು. ಆದರೆ ಇವರ‌ ಜೊತೆ ಫೋಟೋ ತೆಗೆಸಿಕೊಂಡು ಕೆಲವರು ಸಾವಿರಾರು ಕೋಟಿ ಸಮೇತ ವಿದೇಶಕ್ಕೆ ಹಾರಿದ್ದಾರೆ. ನಾಲ್ಕು ವರ್ಷಗಳ ಕಾಲ ಅಧಿಕಾರ ನಡೆಸಿದ ಮೋದಿ ಸರ್ಕಾರ ಯುವಕರ, ರೈತರ ಬಗ್ಗೆ ಯಾವುದೇ ಚರ್ಚೆ ನಡೆಸಲಿಲ್ಲ ಎಂದು ದೂರಿದರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೊ ಸೇರಿದಂತೆ ಹಲವು ಮಹಿಳಾ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English