- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

‘ಟಗರು’ ಚಿತ್ರದ ಶತದಿನೋತ್ಸವ..ಸಂತೋಷ್ ಚಿತ್ರಮಂದಿರದಲ್ಲಿ ಸಂಭ್ರಮಾಚರಣೆ..!

tagaru-film [1]ಬೆಂಗಳೂರು: ಸೆಂಚೂರಿ ಸ್ಟಾರ್‌ ಶಿವರಾಜಕುಮಾರ್ ಅಭಿನಯದ `ಟಗರು’ ಚಿತ್ರ ಯಶಸ್ವಿಯಾಗಿ 100 ದಿನಗಳನ್ನು ಪೂರೈಸಿದೆ. ಈ ವರ್ಷ ಶತ ದಿನಗಳನ್ನು ಪೂರೈಸಿದ ಮೊದಲ ಚಿತ್ರವಾಗಿ `ಟಗರು’ ಹೊರಹೊಮ್ಮಿದೆ.

ಚಿತ್ರತಂಡವು ಇದೇ ತಿಂಗಳು ದೊಡ್ಡ ಸಮಾರಂಭ ಮಾಡಿ, ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರನ್ನು ಗೌರವಿಸಲಿದೆ. ಅದಕ್ಕೂ ಮುನ್ನ ಶಿವರಾಜಕುಮಾರ್ ಅಭಿಮಾನಿಗಳಿಂದ ಅಭಿಮಾನದ 100ನೇ ದಿನದ ಸಂಭ್ರಮಾಚರಣೆ ನಡೆಯಿತು.

tagaru-film-2 [2]ಭಾನುವಾರ ಅಖಿಲ ಕರ್ನಾಟಕ ಡಾ. ಶಿವರಾಜಕುಮಾರ್ ಸೇನಾ ಸಮಿತಿ ಮತ್ತು ಗಂಡುಗಲಿ ಡಾ. ಶಿವರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಸಂತೋಷ್ ಚಿತ್ರಮಂದಿರದಲ್ಲಿ ಸಂಭ್ರಮಾಚರಣೆ ನಡೆಯಿತು.

ಈ ಸಂದರ್ಭದಲ್ಲಿ ಶಿವರಾಜಕುಮಾರ್, ಧನಂಜಯ್, ಮಾನ್ವಿತಾ ಹರೀಶ್, ನಿರ್ಮಾಪಕ ಕೆ.ಪಿ. ಶ್ರೀಕಾಂತ್ ಮುಂತಾದವರು ಹಾಜರಿದ್ದರು. ಆ ನಂತರ ಸಂಜೆ ವೀರೇಶ್ ಚಿತ್ರಮಂದಿರದಲ್ಲಿ ಅಖಿಲ ಕರ್ನಾಟಕ ಡಾ. ಶಿವರಾಜಕುಮಾರ್ ಅಭಿಮಾನಿಗಳ ವತಿಯಿಂದ ಶಿವರಾಜಕುಮಾರ್ ಅವರಿಗೆ ಸನ್ಮಾನ ಮಾಡಿ, ಸಿಹಿ ಹಂಚಲಾಯಿತು. ಇದಲ್ಲದೆ ಮೈಸೂರಿನ ಶಿವರಾಜಕುಮಾರ್ ಸಂಘದ ವತಿಯಿಂದಲೂ `ಟಗರು’ ಚಿತ್ರದ ಶತದಿನೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

tagaru-film-3 [3]`ಟಗರು’ ಚಿತ್ರವನ್ನು ಸೂರಿ ನಿರ್ದೇಶಿಸಿದ್ದು, ಚಿತ್ರದಲ್ಲಿ ಶಿವರಾಜಕುಮಾರ್ ಅವರೊಂದಿಗೆ ಭಾವನಾ ಮೆನನ್, ಮಾನ್ವಿತಾ ಹರೀಶ್, ಧನಂಜಯ್, ವಸಿಷ್ಠ ಸಿಂಹ, ದೇವರಾಜ್, ಸುಧಿ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರಕ್ಕೆ ಮಹೇಂದ್ರ ಸಿಂಹ ಛಾಯಾಗ್ರಹಣ ಮಾಡಿದರೆ, ಚರಣ್‍ರಾಜ್ ಸಂಗೀತ ಸಂಯೋಜಿಸಿದ್ದಾರೆ.