ಪುನೀತ್ ರಾಜ್‍ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ..ಪ್ರಾಣಾಪಾಯದಿಂದ ಪಾರು..!

10:35 AM, Friday, June 8th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

punith-rajkumarಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪವರ್ ಸ್ಟಾರ್ ಪುನೀತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಳ್ಳಾರಿಯಲ್ಲಿ `ನಟಸಾರ್ವಭೌಮ` ಚಿತ್ರದ ಶೂಟಿಂಗ್ ಮುಗಿಸಿ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಗುರುವಾರ ರಾತ್ರಿ 9.30ರ ಸುಮಾರಿಗೆ ಆಂಧ್ರ ಪ್ರದೇಶದ ಅನಂತಪುರ ಸಮೀಪದಲ್ಲಿ ಕಾರಿನ ಟಯರ್ ಬ್ಲಾಸ್ಟ್ ಆಗಿ ಮೂರು ರಸ್ತೆಗಳ ತಿರುವು ಗೊತ್ತಾಗದೇ ಇರುವ ಕಾರಣ ಅಪಘಾತ ಸಂಭವಿಸಿದೆ. ಪರಿಣಾಮ ಕಾರಿನ ಹೆಡ್ ಲೈಟ್ ಬಳಿ ಬಂಪರ್ ಗೆ ಹಾನಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಪುನೀತ್, ನನಗೆ ಏನೂ ಆಗಿಲ್ಲ. ಚೆನ್ನಾಗಿಯೇ ಇದ್ದೇನೆ. ಕಾರಿನ ಟಯರ್ ಸ್ಫೋಟಗೊಂಡಿದೆ ಅಷ್ಟೇ. ಯಾರಿಗೂ ಏನೂ ಆಗಿಲ್ಲ. ನನ್ನ ಬಗ್ಗೆ ಕಾಳಜಿ ತೋರಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English