ಈ ಬಾರಿ ಲೋಕಸಭಾ ಚುನಾವಣೆಗೆ ಬಿ.ರಮಾನಾಥ್ ರೈ ಸ್ಪರ್ಧಿಸುತ್ತಾರಂತೆ !

9:55 PM, Monday, July 2nd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Ramanatha Rai ಮಂಗಳೂರು : ವಿಧಾನ ಸಭಾ ಚುನಾವಣೆಯಲ್ಲಿ ಸೋತ ಬಳಕ ಮಾಜಿ ಸಚಿವ ರಮಾನಾಥ್ ರೈ ಸ್ವಲ್ಪ ಸಮಯದ ಬಿಡುವಿನ ಬಳಿಕ ರಾಜಕೀಯವಾಗಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.  ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ.

ಹಾಗಂತ ಅವರೇ ಕಾರ್ಯಕರ್ತರ ಬಳಿ ಪದೇ ಪದೇ ಹೇಳಿಕೊಳ್ಳುತ್ತಿದ್ದರಂತೆ. ಆ ಬಗ್ಗೆ ಮಾಧ್ಯಮದ ಪ್ರತಿನಿಧಿಗಳಲ್ಲಿಯೂ ಹೇಳಿದ್ದಾರೆ. ಅದಕ್ಕೆ ಪೂರಕವಾಗಿ ಈಗಾಗಲೇ ನಳಿನ್ ಕುಮಾರ್ ವಿರುದ್ಧ ವಾಕ್ ಸಮರಕ್ಕೆ ಇಳಿದಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಕಳೆದ ಲೋಕ ಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿ.ಜನಾರ್ದನ ಪೂಜಾರಿ ಭಾರೀ ಮತಗಳ ಅಂತರದಿಂದ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಎದುರು ಪರಾಭವಗೊಂಡಿದ್ದರು.

ಈ ಕ್ಷೇತ್ರವನ್ನು ಕೈವಶ ಪಡಿಸಲು ಕಾಂಗ್ರೆಸ್ ಶತಾಯಗತಾಯ ಪ್ರಯತ್ನಿಸುತ್ತಿದೆ. ಆದರೆ 1991ರಿಂದ ಅದು ಸಾಧ್ಯವಾಗಿಲ್ಲ. 1977 ರಿಂದ 1989ರ ವರೆಗೆ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿ.ಜನಾರ್ದನ ಪೂಜಾರಿ ಸತತವಾಗಿ ಜಯ ಗಳಿಸಿ ಕಾಂಗ್ರೆಸ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭದ್ರ ಬುನಾದಿ ಹಾಕಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English