[1]ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂ ರಾವ್ ಮತ್ತು ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ನೇಮಕಗೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೆಪಿಸಿಸಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕ ಮಾಡಿದ್ದಾರೆ. ಎಐಸಿಸಿ ಸಂಘಟನಾ ವಿಭಾಗದ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಬುಧವಾರ ಸಂಜೆಯೊಳಗಾಗಿ ಇವರ ನೇಮಕವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ.
ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದಾರೆ.