ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಇಂದು 56 ನೇ ಹುಟ್ಟುಹಬ್ಬದ ಸಂಭ್ರಮ..!

10:43 AM, Thursday, July 12th, 2018
Share
1 Star2 Stars3 Stars4 Stars5 Stars
(No Ratings Yet)
Loading...

shivrajkumarಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ತಮ್ಮ 56 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನಿನ್ನೆ ರಾತ್ರಿ ಮಾನ್ಯತಾ ಟೆಕ್ ಪಾರ್ಕಿನಲ್ಲಿರುವ ಶಿವಣ್ಣ ನಿವಾಸದಲ್ಲಿ ಕುಟುಂಬದವರು ಹಾಗೂ ಆಪ್ತರು ಶಿವಣ್ಣನ ಬರ್ತಡೇ ಆಚರಿಸಿದರು.

ನಿನ್ನೆ ರಾತ್ರಿಯಿಂದಲೇ ಶಿವಣ್ಣ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಪತ್ನಿ ಗೀತಾ, ಮಕ್ಕಳು, ಸ್ನೇಹಿತರೊಂದಿಗೆ ಶಿವಣ್ಣ ಅವರಿಗಾಗಿ ತರಿಸಿದ್ದ ವಿಶೇಷ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು. ರಾತ್ರಿಯೇ ಹುಟ್ಟುಹಬ್ಬದ ಶುಭಾಶಯ ಕೋರಲು ಬಹಳಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಶಿವಣ್ಣ ಮನೆ ಮುಂದೆ ಜಮಾಯಿಸಿದ್ದರು.

ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇಂದು ರಾತ್ರಿವರೆಗೂ ಕೂಡಾ ಜನರು ಶಿವಣ್ಣ ಮನೆ ಬಳಿ ಅಭಿಮಾನಿಗಳು ಬರುವುದರಿಂದ ಸಂಪಿಗೆಹಳ್ಳಿ ಪೊಲೀಸರನ್ನು ಶಿವಣ್ಣ ಮನೆ ಮುಂದೆ ಭದ್ರತೆಗಾಗಿ ನಿಯೋಜಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English