ಖಾಸಗಿ ಬಸ್ ಪಲ್ಟಿ..25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

5:38 PM, Thursday, July 12th, 2018
Share
1 vote, average: 5.00 out of 51 vote, average: 5.00 out of 51 vote, average: 5.00 out of 51 vote, average: 5.00 out of 51 vote, average: 5.00 out of 5
(1 votes, average: 5.00 out of 5, rated)
Loading...

bus-accidentಉಡುಪಿ: ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ಘಟನೆ ನಡೆದಿದೆ.

ಕಾರ್ಕಳದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ಸು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿತು.

bus-accident-2ಇದರ ಪರಿಣಾಮವಾಗಿ ಬಸ್ನಲ್ಲಿದ್ದ 25ಕ್ಕೂ ಹೆಚ್ಚು ಗಾಯಗೊಂಡರು. ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

bus-accident-3ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English