ಪುತ್ತೂರಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ..ಓರ್ವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು!

10:53 AM, Saturday, July 14th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

fighitingಮಂಗಳೂರು: ಪುತ್ತೂರಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದು, ಓರ್ವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಪುತ್ತೂರು ತಾಲೂಕಿನ ದರ್ಬೆ ಜಂಕ್ಷನ್ ಬಳಿ ಮೂವರು ವಿದ್ಯಾರ್ಥಿಗಳು ಓರ್ವ ವಿದ್ಯಾರ್ಥಿ ಜೊತೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ವಿದ್ಯಾರ್ಥಿ ವಿನಯಕುಮಾರ್ಗೆ ಗಾಯವಾಗಿದ್ದು, ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದ ಮೂವರು ವಿದ್ಯಾರ್ಥಿಗಳು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English