ತೈಲ ಬೆಲೆ ಏರಿಕೆ ವಿರುದ್ಧ ಬಿ.ಜೆ.ಪಿ ಯಿಂದ ಪ್ರತಿಭಟನೆ.
Monday, June 28th, 2010ಮಂಗಳೂರು : ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯನ್ನು ಮರು ಪರಿಶೀಲಿಸುವಂತೆ, ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರಿಂದ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ ಕಾಂಗ್ರೇಸ್ ನೇತೃತ್ವದ ಸರಕಾರ ಬಡವರನ್ನು ಉದ್ಧಾರ ಮಾಡುವುದಾಗಿ ಹೇಳಿ ಪ್ರತಿಯೊಂದು ವಸ್ತುವಿನ ಬೆಲೆಯನ್ನು ಏರಿಸುತ್ತಾ ಹೋಗುತ್ತಿದೆ. ಬಡವರ ರಕ್ತ ಹೀರುವಂತಹ ಕೆಲಸ ಕೇಂದ್ರ ಸರಕಾರ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಅಧೀಕಾರಕ್ಕೆ ಏರಿದ 1 ವರ್ಷದಲ್ಲಿ ಡಿಸೀಲ್ ಗೆ ಒಂದು ಲೀಟರ್ ನಲ್ಲಿ 7.50 ಪೈಸೆ ಹೆಚ್ಚಿಸಿದ್ದೂ ಅಲ್ಲದೆ ಅಡುಗೆ […]